HEALTH TIPS

ಆಡು ಬಡಿದು ಬೈಕ್ ಸವಾರಗೆ ಗಂಭೀರ ಗಾಯ- ಪರಿಹಾರ ನೀಡಲು ಆದೇಶ

ಕುಂಬಳೆ: ಆಡು ಅಡ್ಡ ಬಂದ ಪರಿಣಾಮ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಾಳುವಿಗೆ ಸೂಕ್ತ ನಷ್ಟ ಪರಿಹಾರ ನೀಡುವಂತೆ ಕಾಸರಗೋಡು ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗವು ವಿಮಾ ಕಂಪೆನಿಗೆ ಸೂಚಿಸಿದೆ. ಸೀತಾoಗೋಳಿ ನಿವಾಸಿ ಫ್ರಾನ್ಸಿಸ್ ಪಾಸ್ಕಲ್ ಡಿ ಸೋಜಾ ಅವರು ಸಲ್ಲಿಸಿದ ದೂರು ಪರಿಗಣಿಸಿ ಈ ತೀರ್ಪು ನೀಡಲಾಗಿದೆ. ಪಾಸ್ಕಲ್ ಡಿ" ಸೋಜಾ ಅವರು ಕಳತ್ತೂರಿನಲ್ಲಿ ಕಟ್ಟತ್ತಡ್ಕ ದಾರಿಯಾಗಿ ಸೀತಾoಗೋಳಿಗೆ ತನ್ನ ಬೈಕ್ ನಲ್ಲಿ ಸಂಚರಿಸುವ ಮಧ್ಯೆ ಪಳ್ಳಂ ಎಂಬಲ್ಲಿ  ಆಡುಗಳ ಹಿಂಡೊಂದು ರಸ್ತೆಯಲ್ಲಿ ಅಸ್ತವ್ಯಸ್ತವಾಗಿ ಚಲಿಸಿದ ಪರಿಣಾಮ ಅಪಘಾತ ಸಂಭವಿಸಿತ್ತು. ಇದರಿಂದ ಕಾಲಿನ ಮೂಳೆ ಮುರಿತಕ್ಕೊಳಗಾಗಿ ಗಂಭೀರ ಗಯಗೊಂಡ ಪಾಸ್ಕಲ್ ಅವರ ಚಿಕಿತ್ಸೆಗೆ ಹೆಚ್ಚಿನ ಮೊತ್ತ ವ್ಯಯವಾಗಿತ್ತು. ಈ ಬಗ್ಗೆ ಕುಂಬಳೆ ಪೆÇಲೀಸರಿಗೆ ದೂರು ಸಲ್ಲಿಸಿದರೂ ಆರೋಪಿ ಸ್ಥಾನದಲ್ಲಿ ಆಡುಗಳು ಆಗಿರುವುದರಿಂದ ಮೊಕದ್ದಮೆ ದಾಖಲಿಸಲು ಪೆÇಲೀಸರು ನಿರಾಕರಿಸಿದ್ದರು.  ಇದೇ ಕಾರಣ ಮುಂದೊಡ್ಡಿ ವಿಮಾ ಕಂಪನಿಯೂ ಪರಿಹಾರ ನೀಡಲು ವಿಸಮ್ಮತಿಸಿತು. ಇದರಿಂದಾಗಿ ಸಂತ್ರಸ್ತ ವ್ಯಕ್ತಿ ಗ್ರಾಹಕರ ದೂರು ಪರಿಹಾರ ಆಯೋಗದ ಮೊರೆ ಹೋಗಿದ್ದರು. ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ದೂರುದಾರರಿಗೆ ಸೂಕ್ತ ಪರಿಹಾರ ಹಾಗೂ ನ್ಯಾಯಾಲಯ ವೆಚ್ಚವನ್ನು ನೀಡುವಂತೆ ಮಹತ್ವದ ಆದೇಶ ನೀಡಿದೆ. ವಾದಿಯ ಪರವಾಗಿ ಕಾಸರಗೋಡಿನ ಖ್ಯಾತ ವಕೀಲ ಥಾಮಸ್ ಡಿ" ಸೋಜಾ ವಾದಿಸಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries