HEALTH TIPS

ಕಾಸರಗೋಡು : ನಿಯಂತ್ರಣ ತಪ್ಪಿ ಮಗುಚಿಬಿದ್ದ ಆಟೋ ರಿಕ್ಷಾ; ಚಾಲಕ, ಏಳು ವಿದ್ಯಾರ್ಥಿಗಳಿಗೆ ಗಾಯ

ಕಾಸರಗೋಡು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮಗುಚಿಬಿದ್ದ ಪರಿಣಾಮ ಚಾಲಕ ಸೇರಿದಂತೆ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಇಂದು (ಬುಧವಾರ) ಬೆಳಿಗ್ಗೆ ಕಾಸರಗೋಡು ನಗರದಲ್ಲಿ ನಡೆದಿದೆ.


ಇಂದು ಬೆಳಿಗ್ಗೆ ಸುಮಾರು 9:15ರ ವೇಳೆಗೆ ಕಾಸರಗೋಡು ನಗರದ ಎಂ.ಜಿ. ರಸ್ತೆಯ ಫೋರ್ಟ್ ರಸ್ತೆ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಆರಾಧ್ಯ (12), ಅಥರ್ವ (6), ಅರ್ವಿನ್ (7), ಮರಿಯಮ್ (10), ದೀಪಪ್ನಾ (12), ಅನಶ್ವರ (10), ಇಯಾನ್ ಸುನಿಲ್ (6) ಹಾಗೂ ಆಟೋ ಚಾಲಕ ಉಮೇಶ್ ಗಾಯಗೊಂಡವರು. ತಕ್ಷಣವೇ ಗಾಯಗೊಂಡ ಎಲ್ಲರನ್ನೂ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಗಾಯಗೊಂಡಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries