ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮುಂದುವರೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ನಾಳೆ (ಶುಕ್ರವಾರ, ಜುಲೈ 31) ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‍ಇ, ಸಿಬಿಎಸ್‍ಇ ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯಿಸುತ್ತದೆ. ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಾಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.
ಪೂರ್ವ ನಿಗದಿತ ವಿಶ್ವವಿದ್ಯಾಲಯ/ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

