ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ ಕುಟುಂಬ ಆರೋಗ್ಯ ಕೇಂದ್ರದ ವತಿಯಿಂದ ಸಿಡಿಎಸ್ ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಶಿಬಿರ ಮಂಗಳವಾರ ನಡೆಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಉದ್ಘಾಟಿಸಿದರು. ಅವರು ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ಇಂತಹ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಬೇಕು ಎಂದು ಕರೆ ನೀಡಿದರು.
ಬದಿಯಡ್ಕ ಗ್ರಾಮ ಪಂಚಾಯಿತಿ ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಸದಸ್ಯರುಗಳಾದ ಶ್ಯಾಮಪ್ರಸಾದ ಮಾನ್ಯ, ಮಧುಸೂದನ ಕಂಗಿಲ, ಗಂಗಾಧರ ಗೋಳಿಯಡ್ಕ, ಶ್ಯಾಮಪ್ರಸಾದ ಸರಳಿ, ಅನ್ನತ್ ಬೀವಿ, ಶಾಹಿನಾ ಅನ್ವರ್, ಹರೀಶ ಕೆ., ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ನವಜೀವನ ಶಾಲೆಯ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಸಹಕರಿಸಿದರು. ಕಣ್ಣು ಹಾಗೂ ಕಿವಿಗಳ ತಪಾಸಣೆ, ಬಿಪಿ, ಮಧುಮೇಹ, ಹೆಚ್‍ಐವಿ ತಪಾಸಣೆ ನಡೆಸಲಾಯಿತು. 100ಕ್ಕೂ ಹೆಚ್ಚು ಮಂದಿ ತಪಾಸಣೆಯಲ್ಲಿ ಪಾಲ್ಗೊಂಡಿದ್ದರು.

.jpg)
.jpg)
