ನವದೆಹಲಿ (PTI): 'ಇ20 ಪೆಟ್ರೋಲ್' ಮಾರಾಟ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪುಮಾಹಿತಿ ಹರಡಲಾಗುತ್ತಿದೆ ಎಂದು ಹೇಳಿರುವ ಕೇಂದ್ರ ಸರ್ಕಾರವು, ಇದರ ಬಗ್ಗೆ ಹತ್ತು ಅಂಶಗಳ ಸ್ಪಷ್ಟನೆಯನ್ನು ಶುಕ್ರವಾರ ನೀಡಿದೆ.
ವೈಜ್ಞಾನಿಕ ಅಧ್ಯಯನ, ಅಂತರರಾಷ್ಟ್ರೀಯ ಮಟ್ಟದಲ್ಲಿನ ಅನುಭವ ಹಾಗೂ ನಿಯಮಗಳ ಅನ್ವಯ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಹೇಳಿದೆ.
ಒಂದು ಲೀಟರ್ ಎಥೆನಾಲ್ ಉತ್ಪಾದಿಸಲು 10 ಸಾವಿರ ಲೀಟರ್ ನೀರು ಬೇಕು ಎಂಬ ಮಾತುಗಳು ಸುಳ್ಳು, ದೇಶದ ಆಹಾರ ಭದ್ರತೆಗೆ ಅಗತ್ಯವಿರುವ ಅಕ್ಕಿಯನ್ನು ತೆಗೆದಿರಿಸಿದ ನಂತರ ಉಳಿಯುವ ಹೆಚ್ಚುವರಿ ಅಕ್ಕಿಯನ್ನು ಮಾತ್ರ ಎಥೆನಾಲ್ ಉತ್ಪಾದನೆಗೆ ಬಳಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.

