HEALTH TIPS

ಶಾಲೆಗಳ ಸಮೀಪ 'ಸ್ಟಿಂಗ್‌' ಮಾರಾಟ ನಿಷೇಧಿಸಿದ ಮಹಾರಾಷ್ಟ್ರ ಸರ್ಕಾರ

 ಮುಂಬೈ: ಶಾಲೆಗಳಿಂದ 500 ಮೀಟರ್‌ ವ್ಯಾಪ್ತಿಯಲ್ಲಿ 'ಸ್ಟಿಂಗ್‌' ಶಕ್ತಿವರ್ಧಕ ಪಾನೀಯ ಮತ್ತು ಇತರ ನಶೆಯ ವಸ್ತುಗಳ ಮಾರಾಟವನ್ನು ನಿಷೇಧಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಘೋಷಿಸಿದೆ.


'ಸ್ಟಿಂಗ್‌' ಪಾನೀಯದಲ್ಲಿರುವ ಕೆಲವು ಅಂಶಗಳು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಳವಳ ವ್ಯಕ್ತವಾದ ಬಳಿಕ ಸರ್ಕಾರ ಈ ಕ್ರಮ ಕೈಗೊಂಡಿದೆ.

ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ವಿಕ್ರಮ್‌ ಪಚಪುತೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆಹಾರ ಖಾತೆ ಸಚಿವ ನರಹರಿ ಜಿರ್ವಾಲ್‌ ಅವರು, 'ಪಾನೀಯವು ಮಕ್ಕಳ ಮೇಲೆ ಬೀರುತ್ತಿರುವ ಪರಿಣಾಮದ ಬಗ್ಗೆ ತೀವ್ರ ಕಳವಳ ವ್ಯಕ್ತವಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ' ಎಂದು ತಿಳಿಸಿದರು.

ಶಕ್ತಿವರ್ಧಕ ಪಾನೀಯಗಳಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲು ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries