ಮಂಜೇಶ್ವರ: ಕಾಸರಗೋಡು ಜಿಲ್ಲಾ ಪಂಚಾಯತಿ ವರ್ಕಾಡಿ ಡಿವಿಜನ್ ವ್ಯಾಪ್ತಿಯಲ್ಲಿ ಬರುವ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪ್ಲಸ್ ಟು ವಿಭಾಗಗಳಲ್ಲಿ ಎಲ್ಲಾ ವಿಷಯಗಳಲ್ಲೂ ಎ ಪ್ಲಸ್ ಪಡೆದ ವಿದ್ಯಾರ್ಥಿಗಳನ್ನು ಜಿ.ಪಂ.ಸದಸ್ಯ ಹರ್ಷಾದ್ ವರ್ಕಾಡಿ ಇವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಸೃಜನ್ ಯಂ.ಬಿ. ಇವರನ್ನು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ಸಾಬು ಅಬ್ರಹಾಂ, ವರ್ಕಾಡಿ ಪಂಚಾಯತಿ ಅಧ್ಯಕ್ಷ ಉಮ್ಮರ್ ಬೋರ್ಕಳ ಮೊದಲಾದ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಲಾಯಿತು.

.jpg)
