ಕಾಸರಗೋಡು: ಬಿಜೆಪಿ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ಜಯಂತ್ಯುತ್ಸವದ ಅಂಗವಾಗಿ ಸಂಸ್ಮರಣೆ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮ ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದ ಸಭಾಂಗಣದಲ್ಲಿ ಜರುಗಿತು.
ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ನಡೆಯಿತು. ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಸಮಾರಂಭ ಉದ್ಘಾಟಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸವಿತಾ ಟೀಚರ್, ಸತೀಶ್ಚಂದ್ರ ಭಂಡಾರಿ, ರಾಮಪ್ಪ ಮಂಜೇಶ್ವರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಮನುಲಾಲ್ ಮೇಲತ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರನ್ ಕುದ್ರೆಪ್ಪಾಡಿ, ಮಂಡಲ ಕೋಶಾಧಿಕಾರಿ ಹರೀಶ್ ಕೆ.ಆರ್, ಮುನ್ಸಿಪಲ್ ಟೌನ್ ಈಸ್ಟ್ ಏರಿಯಾ ಸಮಿತಿ ಅಧ್ಯಕ್ಷ ವರಪ್ರಸಾದ್ ಕೋಟೆಕಣಿ, ವೆಸ್ಟ್ ಏರಿಯಾ ಸಮಿತಿ ಅಧ್ಯಕ್ಷ ಪುರುಷೋತ್ತಮನ್, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಭಗೀಶ್ ಪೂರಾಡನ್, ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ. ವಲ್ಸರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ, ಕೃಷಿಕ ಮೋರ್ಚಾ ಜಿಲ್ಲಾ ಅಧ್ಯಕ್ಷ ಸುಕುಮಾರ್ ಕಾಲಿಕ್ಕಡವು, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಎಸ್. ರಮಣಿ ಹಾಗೂ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.



