ನವದೆಹಲಿ: ಸಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಯಾರಾದರೂ ನೇರವಾಗಿ ಹಿಂಸಾಚಾರದಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಅಂಥವರ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.
ಸಿ.ಸಿ.ಟಿ.ವಿ ದೃಶ್ಯಾವಳಿಗಳು, ವಿಡಿಯೊ ರೆಕಾರ್ಡಿಂಗ್‌ಗಳು ಮತ್ತು ಇತರ ತಾಂತ್ರಿಕ ಸಾಕ್ಷ್ಯಗಳ ಮೂಲಕ ದೆಹಲಿ ಪೊಲೀಸರು, ಪ್ರತಿಭಟನೆ ಸಮಯದಲ್ಲಿ ಗಲಭೆ ಹಾಗೂ ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರುವ ವ್ಯಕ್ತಿಗಳನ್ನು ಗುರುತಿಸುವ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ ಎಂದು ಮೂಲಗಳು ಹೇಳಿವೆ.

