HEALTH TIPS

ಉಕ್ರೇನ್ ಮೇಲೆ ರಷ್ಯಾ ಅಣ್ವಸ್ತ್ರ ದಾಳಿ ನಡೆಸದಂತೆ ತಡೆದ ಮೋದಿ: ಪೋಲೆಂಡ್ ಸಚಿವ

 ನವದೆಹಲಿ:ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸದಂತೆ ತಡೆಯುವಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಪೋಲೆಂಡ್ ಸರ್ಕಾರದ ಸಚಿವರೊಬ್ಬರು ಬಹಿರಂಗಪಡಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.


ಪೋಲೆಂಡ್‌ನ ವಿದೇಶಾಂಗ ಇಲಾಖೆಯ ರಾಜ್ಯ ಕಾರ್ಯದರ್ಶಿ ಹಾಗೂ ಉಪ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

'2022ರಲ್ಲಿ ಉಕ್ರೇನ್ ಮೇಲೆ ಅಣ್ವಸ್ತ್ರ ದಾಳಿ ನಡೆಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಾಗಿದ್ದರು. ಈ ವಿಷಯ ತಿಳಿದ ಕೂಡಲೇ ಅಮೆರಿಕವು ಅಂತಹ ಸಾಹಸಕ್ಕೆ ಕೈಹಾಕದಂತೆ ಎಚ್ಚರಿಕೆ ನೀಡಿತ್ತು. ಆದರೆ ಅಮೆರಿಕದ ಎಚ್ಚರಿಕೆಗೆ ಪುಟಿನ್ ಕಡೆಗಣಿಸಿದ್ದರು' ಎಂದಿದ್ದಾರೆ.

'ಆ ನಿರ್ಣಾಯಕ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ರಷ್ಯಾ ನಡೆಸುತ್ತಿರುವ ಈ ಯುದ್ಧಕ್ಕೆ ಭಾರತ ಮತ್ತು ಚೀನಾ ದೇಶಗಳ ಯಾವುದೇ ಸಹಮತ ಇರಲಿಲ್ಲ. ಜಾಗತಿಕ ಹಿತಾಸಕ್ತಿಯ ಈ ರಾಜತಾಂತ್ರಿಕ ಒತ್ತಡಕ್ಕೆ ಮಣಿದ ಪುಟಿನ್, ಕೊನೆಗೂ ಅಣ್ವಸ್ತ್ರ ಬಳಸುವ ಆಲೋಚನೆಯಿಂದ ಹಿಂದೆ ಸರಿದಿದ್ದರು' ಎಂದು ಪೋಲೆಂಡ್ ಸಚಿವರು ಹೇಳಿದ್ದಾರೆ.










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries