ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ ಬಳಿಕ ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿದರು.
ಪ್ರಾಣಿಗಳ ಹತ್ಯೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು 2005ರಲ್ಲಿ ನೀಡಿದ್ದ ತೀರ್ಪನ್ನು ಅಧಿಕಾರಿಗಳು ಅನುಷ್ಠಾನಗೊಳಿಸುತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.
ಯಾವುದಾದರೂ ಆದೇಶದ ಉಲ್ಲಂಘನೆಯಾಗಿದ್ದರೆ ನೀವು ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿ ಎಂದು ಪೀಠವು ಅವರಿಗೆ ತಿಳಿಸಿತು.
ಇತರ ಕಾನೂನಾತ್ಮಕ ಪರಿಹಾರಗಳನ್ನು ಕಂಡುಕೊಳ್ಳುವ ಸ್ವಾತಂತ್ರ್ಯದೊಂದಿಗೆ ಅರ್ಜಿಯನ್ನು ಹಿಂತೆಗೆದುಕೊಳ್ಳಲು ಸರ್ವೋಚ್ಚ ನ್ಯಾಯಾಲಯವು ಅರ್ಜಿದಾರರಿಗೆ ಅನುಮತಿ ನೀಡಿತು.
ಕಾನೂನಿಗೆ ಅನುಸಾರವಾಗಿ ಕಸಾಯಿಖಾನೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.
ಅಸ್ತಿತ್ವದಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಉಲ್ಲಂಘಿಸುವ ಕಸಾಯಿಖಾನೆಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಬೇಕೆಂದೂ ಅರ್ಜಿಯಲ್ಲಿ ಕೋರಲಾಗಿತ್ತು.

