ನವದೆಹಲಿ: ಹೊರ್ಮುಜ್ ಜಲಸಂಧಿಯಲ್ಲಿ ಚಲಿಸುತ್ತಿದ್ದ ಯುನೈಟೆಡ್ ಅರಬ್ ಎಮಿರೈಟ್ಸ್‌ನ (ಯುಎಇ) ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಅವಘಡದಲ್ಲಿ ಭಾರತೀಯ ನಾವಿಕರೊಬ್ಬರು ಮೃತಪಟ್ಟಿದ್ದು, ಹಲವು ಗಾಯಗೊಂಡಿರುವುದಕ್ಕೆ ಭಾರತ ಖಂಡನೆ ವ್ಯಕ್ತಪಡಿಸಿದೆ.
ಈ ಕುರಿತು ಇರಾನ್ ರಾಜತಾಂತ್ರಿಕರಿಗೆ ಭಾರತೀಯ ವಿದೇಶಾಂಗ ಸಚಿವಾಲಯ ಸಮನ್ಸ್ ಜಾರಿ ಮಾಡಿದೆ.
ಹೊರ್ಮುಜ್ ಜಲಸಂಧಿಯಲ್ಲಿ ಚಲಿಸುತ್ತಿದ್ದ ಯುನೈಟೆಡ್ ಅರಬ್ ಎಮಿರೈಟ್ಸ್‌ನ (ಯುಎಇ) 'ಮೊಂಬಾಸಾ' ಮತ್ತು 'ಅಲ್ ಬಹಿಯಾ' ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ.
'ಮೊಂಬಾಸಾ ಟ್ಯಾಂಕರ್‌ನಲ್ಲಿದ್ದ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದು, ಆರು ಭಾರತೀಯರು ಹಾಗೂ ಇಬ್ಬರು ಉಕ್ರೇನ್ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ' ಎಂದು ಯುಎಇ ರಕ್ಷಣಾ ಸಚಿವಾಲಯ ಪ್ರಕಟಣೆ ತಿಳಿಸಿದೆ.
'ಹೊರ್ಮುಜ್ ಜಲಸಂಧಿಯ ದಕ್ಷಿಣ ಹಡಗು ಮಾರ್ಗದಲ್ಲಿ ಚಲಿಸುತ್ತಿದ್ದ ನಮ್ಮ ಟ್ಯಾಂಕರ್‌ಗಳಾದ 'ಮೊಂಬಾಸಾ' ಮತ್ತು 'ಅಲ್ ಬಹಿಯಾ'ಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ದಾಳಿಯಿಂದಾಗಿ ಎರಡೂ ಟ್ಯಾಂಕರ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಸ್ತುತ ಬೆಂಕಿಯನ್ನು ಹತೋಟಿಗೆ ತರಲಾಗಿದೆ' ಎಂದೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ.

