HEALTH TIPS

ಶಿಕ್ಷಣ ಸಂಸ್ಥೆಗಳಿಗೆ ರಜೆ, ಸುಳ್ಳು ಪ್ರಚಾರ ನಡೆಸುವವರ ವಿರುದ್ಧ ಕಠಿಣ ಕ್ರಮ-ಜಿಲ್ಲಾಧಿಕಾರಿ

ಕಾಸರಗೋಡು: ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶ ಪ್ರಚಾರಪಡಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ. 


ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡುವ ಬಗ್ಗೆ ಜಿಲ್ಲಾಧಿಕಾರಿ ನೀಡುವ ಸೂಚನೆಗಳು ಪಿಆರ್‍ಡಿ ಪ್ರಕಟಣೆ, ಜಿಲ್ಲಾಧಿಕಾರಿಯವರ ವೈಯಕ್ತಿಕ ಫೇಸ್‍ಬುಕ್, ಇನ್‍ಸ್ಟಾಗ್ರಾಮ್ ಪೇಜ್, ಜಿಲ್ಲಾ ಇನ್‍ಫರ್ಮೇಶನ್ ಕಚೇರಿಯ ಫೇಸ್‍ಬುಕ್ ಪೇಜ್‍ನಲ್ಲಿ ಮಾತ್ರ ಪ್ರಕಟಪಡಿಸಲಾಗುವುದು. ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಪ್ರಚಾರ ನಡೆಸಿ, ಜನರ ಹಾದಿ ತಪ್ಪಿಸುತ್ತಿರುವುದು ಗಮನಕ್ಕೆ ಬಂದಿದೆ. ನಕಲಿ ಸುದ್ದಿಗಳನ್ನು ಪ್ರಚಾರಪಡಿಸುವವರನ್ನು ಪತ್ತೆಹಚ್ಚಿ, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಬಿರುಸಿನ ಮಳೆ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಿರುವುದಾಗಿ ಕೆಲವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಪ್ರಕಟಗೊಳ್ಳುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಈ ಪ್ರಕಟಣೆ ಹೊರಡಿಸಿದ್ದಾರೆ. 

















ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries