ಕಾಸರಗೋಡು: ಜಿಲ್ಲೆಯ ಅತ್ಯಂತ ಹಿರಿಯ ಮತದಾರ, ಪನತ್ತಡಿ ನಿವಾಸಿ ವೆಂಕಪ್ಪ ನಾಯ್ಕ್ (107) ನಿಧನರಾದರು. ಅಸೌಖ್ಯದಿಂದ ಬಳಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಪಾರ ನಂಬಿಕೆಯೊಂದಿಗೆ ಪ್ರತಿ ಚುನಾವಣೆಯಲ್ಲೂ ಮತದಾನ ಮಾಡುತ್ತಿದ್ದ ಅವರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಮನೆಗೆ ತೆರಳಿ ಅಭಿನಂದಿಸಿದ್ದರು. ಪನತ್ತಡಿ ಗ್ರಾಮ ಪಂಚಾಯಿತಿಯ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಪಾತ್ರರಾಗಿದ್ದರು. ಇವರು ಒಂಬತ್ತು ಮಂದಿ ಮಕ್ಕಳನ್ನು ಅಗಲಿದ್ದಾರೆ.


