ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಗರದಲ್ಲಿ ಉಗ್ರರು ಬುಧವಾರ ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಅನಂತನಾಗ್ ನಗರದ ಲಾಲ್ ಚೌಕ್‌ನಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.
ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಆಶಿಕ್ ಹುಸೇನ್ ಎಂದು ಗುರುತಿಸಲಾಗಿದೆ. ಅವರು ಅಮರನಾಥ ಯಾತ್ರೆಯ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ದಾಳಿಯಲ್ಲಿ ಗಂರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ಆಸ್ಪತ್ರೆಗೆ ಕರೆದೂಯ್ಯುತ್ತಿದ್ದಾಗ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ದಾಳಿಕೋರರ ಪತ್ತೆಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ' ಎಂದು ಅವರು ಹೇಳಿದರು.
ದಾಳಿಯ ಹೊಣೆಯನ್ನು ಭಯೋತ್ಪಾದಕ ಸಂಘಟನೆ ದಿ-ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿರುವುದಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದೆ.

