ಕಾಸರಗೋಡು: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 22ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ಪಡುಕುತ್ಯಾರಿನ ಶ್ರೀಮಠದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಚಾತುರ್ಮಾಸ್ಯ ವ್ರತ ಸಂಕಲ್ಪ ಯಾತ್ರೆ ಕಾಸರಗೋಡು ಜಿಲ್ಲೆಯಲ್ಲಿ ಪರ್ಯಟನೆ ನಡೆಸಲಾಯಿತು.
ಜೂನ್ 18ರಂದು ಆರಂಭಗೊಂಡ ಸಂಕಲ್ಪ ಯಾತ್ರೆಯನ್ವಯ ಬಂಗ್ರ ಮಂಜೇಶ್ವರದ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನ, ಆರಿಕ್ಕಾಡಿಯ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನ ಹಾಗೂ ಕಾಞಂಗಾಡಿನ ಅಜಾನೂರು ಶ್ರೀಮದ್ ಪರಶಿವ ವಿಶ್ವಕರ್ಮ ದೇವಸ್ಥಾನಗಳಲ್ಲಿ ಶ್ರೀದೇವರ ದರ್ಶನ ಪಡೆದು, ಮಧೂರಿನ ಶ್ರೀ ಕಾಳಿಕಾಂಬಾ ಮಠದಲ್ಲಿ ಸಂಪನ್ನಗೊಂಡಿತು.
ಮಧೂರು ಕಾಳಿಕಾಂಬಾ ಮಠದಲ್ಲಿ ನಡೆದ ಸಮರಂಭದಲ್ಲಿ ಆನೆಗುಂದಿ ಮಠದ ಪ್ರತಿಷ್ಠಾನದ ವತಿಯಿಂದ ಮಧೂರು ಶ್ರೀ ಕಾಳಿಕಾಂಬಾ ಮಠದ ಪದಾಧಿಕಾರಿಗಳಿಗೆ ಚಾತುರ್ಮಾಸ್ಯ ಮಹೋತ್ಸವದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಲಾಯಿತು.
ಶ್ರೀಮಠದ ಅಧ್ಯಕ್ಷ ಎಂ. ಪುರುಷೋತ್ತಮ ಆಚಾರ್ಯ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಗದ್ಗುರುಗಳ ಪ್ರಧಾನ ಆಪ್ತ ಸಹಾಯಕ ಲೋಲಾಕ್ಷ ಶರ್ಮ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.
ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ವಿವಿಧ ನಾಮರೂಪಗಳಲ್ಲಿ ಭಕ್ತರ ಕೋರಿಕೆಗಳನ್ನು ಈಡೇರಿಸುವ ಆದಿಶಕ್ತಿ ಮಹಾತಾಯಿ ಇಲ್ಲಿ ಕಾಳಿಕಾಂಬೆಯಾಗಿ ನೆಲೆಸಿದ್ದಾಳೆ. ನಮ್ಮ ಸಂಸ್ಕøತಿ, ಸಂಸ್ಕಾರ ಮತ್ತು ಧಾರ್ಮಿಕ ಪರಂಪರೆಯನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡು ಮಕ್ಕಳಿಗೂ ತಿಳಿಸಬೇಕು. ಸಂಸ್ಕಾರಯುತ ಪೀಳಿಗೆ ನಿರ್ಮಾಣವಾದಾಗ ಮಾತ್ರ ಸಮಾಜ ಸುಭದ್ರವಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್ ಕಂಬಾರು, ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ ಆಚಾರ್ಯ ಕೆಮ್ಮಣ್ಣು, ಹರೀಶ್ ಆಚಾರ್ಯ ಹರೇಕಳ, ಜನಾರ್ದನ ಆಚಾರ್ಯ ಬಜಕೂಡ್ಲು, ಉಮೇಶ್ ಆಚಾರ್ಯ ಪುತ್ತೂರು, ದಯಾನಂದ ಆಚಾರ್ಯ ಕೆಳಾರ್ಕಳಬೆಟ್ಟು, ವೈ. ಧಮೇರ್ಂದ್ರ ಆಚಾರ್ಯ ಕಾಸರಗೋಡು, ನೀರ್ಚಾಲು ಪರಮೇಶ್ವರ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು.
ಶ್ರೀಮಠದ ಉಪಾಧ್ಯಕ್ಷ ಕೆ. ಜಗದೀಶ ಆಚಾರ್ಯ ಕಂಬಾರು ಸ್ವಾಗತಿಸಿದರು. . ಬಾಲಕೃಷ್ಣ ಆಚಾರ್ಯ ಪುತ್ತಿಗೆ ಕಾರ್ಯಕ್ರಮ ನಿರೂಪಿಸಿದರು.ಪುರುಷೋತ್ತಮ ಆಚಾರ್ಯ ಬದಿಯಡ್ಕ ವಂದಿಸಿದರು.



