HEALTH TIPS

ಸಂಸದೆಯೊಬ್ಬರ ವಿರುದ್ಧ ಅಸಂಸದೀಯ ಭಾಷೆ ಬಳಕೆ ಆರೋಪ: ಅಧಿವೇಶನದ ಉಳಿದ ಅವಧಿಗೆ ಕಲ್ಯಾಣ್ ಬ್ಯಾನರ್ಜಿ ಅಮಾನತು

ನವದೆಹಲಿ: ಸದನದ ಮಹಿಳಾ ಸದಸ್ಯೆಯೊಬ್ಬರ ವಿರುದ್ಧ ಅಸಂಸದೀಯ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಉಳಿದ ಮಳೆಗಾಲದ ಅಧಿವೇಶನದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸುವ ನಿರ್ಣಯವನ್ನು ಲೋಕಸಭೆ ಬುಧವಾರ ಧ್ವನಿ ಮತದ ಮೂಲಕ ಅಂಗೀಕರಿಸಿತು. 


ಸದನದ ಅಧ್ಯಕ್ಷತೆ ವಹಿಸಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ ಅವರು ಬ್ಯಾನರ್ಜಿ ಅವರ ಹೇಳಿಕೆಗಳು ಸದನದ ಘನತೆಗೆ ಧಕ್ಕೆ ತಂದಿವೆ ಎಂದರು. ಅವರನ್ನು ಮಳೆಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯವನ್ನು ಸದನದ ಮುಂದೆ ಮಂಡಿಸಿದರು. ಬಳಿಕ ಸದನವು ಅದನ್ನು ಧ್ವನಿ ಮತದ ಮೂಲಕ ಅಂಗೀಕರಿಸಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಿದ್ದ ಸಂದರ್ಭದಲ್ಲೇ ಈ ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ನಿರ್ಣಯ ಅಂಗೀಕಾರವಾದ ಬಳಿಕ ಸದನದ ಅಧ್ಯಕ್ಷತೆ ವಹಿಸಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ ಕಲ್ಯಾಣ್ ಬ್ಯಾನರ್ಜಿ ಅವರನ್ನು ಸದನದ ಆವರಣದಿಂದ ಹೊರಹೋಗುವಂತೆ ಸೂಚಿಸಿದರು. ಬಳಿಕವೂ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಮುಂದುವರಿಸಿದ್ದರಿಂದ ಲೋಕಸಭೆಯನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಇದಕ್ಕೂ ಮುನ್ನ, ವಿರೋಧ ಪಕ್ಷದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಿದ ಬಳಿಕ, ಕಲ್ಯಾಣ್ ಬ್ಯಾನರ್ಜಿ ಅವರು ಈಗ ಓಅPI ಸದಸ್ಯರಾಗಿರುವ ತಮ್ಮ ಮಾಜಿ ತೃಣಮೂಲ ಕಾಂಗ್ರೆಸ್ ಸಹೋದ್ಯೋಗಿಗಳೊಂದಿಗೆ ಲೋಕಸಭೆಯಲ್ಲಿ ತೀವ್ರ ವಾಗ್ವಾದ ನಡೆಸಿದರು.

ಈ ವಾಗ್ವಾದದಲ್ಲಿ NCPI ಸಂಸದರಾದ ಮಿತಾಲಿ ಬಾಗ್, ಶತಾಬ್ದಿ ರಾಯ್ ಹಾಗೂ ಕಾಕೋಲಿ ಘೋಷ್ ದಸ್ತಿದಾರ್ ಭಾಗಿಯಾಗಿದ್ದರು. ವಾಗ್ವಾದಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.

ಪರಿಸ್ಥಿತಿಯನ್ನು ಶಮನಗೊಳಿಸಲು ಹಲವಾರು ವಿರೋಧ ಪಕ್ಷದ ಸಂಸದರು ಮಧ್ಯಪ್ರವೇಶಿಸಿದರು. ಘಟನೆಯ ಕುರಿತು ಇತರ ವಿರೋಧ ಪಕ್ಷದ ಸದಸ್ಯರು ಪ್ರಶ್ನಿಸಿದಾಗ ಕಲ್ಯಾಣ್ ಬ್ಯಾನರ್ಜಿ ಅವರು ಸದನದಿಂದ ಹೊರನಡೆದರು ಎಂದು ವರದಿಯಲ್ಲಿ ಹೇಳಲಾಗಿದೆ.

ಬಳಿಕ ಮಿತಾಲಿ ಬಾಗ್, ಕಾಕೋಲಿ ಘೋಷ್ ದಸ್ತಿದಾರ್ ಹಾಗೂ ಇತರ ಕೆಲವು NCPI ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಅವರ ಕೊಠಡಿಯಲ್ಲಿ ಭೇಟಿ ಮಾಡಿ, ಘಟನೆಯ ಕುರಿತು ದೂರು ಸಲ್ಲಿಸಿದರು.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಳಿಕ ತೃಣಮೂಲ ಕಾಂಗ್ರೆಸ್‌ನ 20 ಸಂಸದರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು, ನಂತರ NCPIಗೆ ಸೇರ್ಪಡೆಯಾಗಿದ್ದರು. ಅಂದಿನಿಂದ ಅವರು ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸದಸ್ಯರಿಂದ ಪ್ರತ್ಯೇಕವಾಗಿ ಆಸೀನರಾಗಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರು ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್‌ನಲ್ಲೇ ಮುಂದುವರಿದಿದ್ದಾರೆ. ಸಂಸತ್ತಿನ ಮಳೆಗಾಲದ ಅಧಿವೇಶನ ಆಗಸ್ಟ್ 13ರಂದು ಮುಕ್ತಾಯಗೊಳ್ಳಲಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries