ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಯಿತು. ಸಾರ್ವಜನಿಕ ಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಪೂರ್ಣಗೊಂಡಿರುವ ಕಟ್ಟಡವನ್ನು ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಸೇರಿಸಿ ನಬಾರ್ಡ್ ನಿಧಿಯಡಿ ಪೂರ್ಣಗೊಳಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಅಧ್ಯಕ್ಷತೆ ವಹಿಸಿದ್ದ ಶಾಸಕ ಕಲ್ಲಟ್ರ ಮಾಹಿನ್ ನೂತನ ಕಟ್ಟಡದ ಎರಡು ಮಹಡಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು. ಶಿಥಿಲಗೊಂಡಿರುವ ಕಟ್ಟಡಗಳ ನವೀಕರಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಸೂಚಿಸಿದರು. ಹೊಸದಾಗಿ ನಿರ್ಮಿಸಿರುವ ಶವಾಗಾರದ ಕಟ್ಟಡದಲ್ಲಿ ಅಗತ್ಯ ಪೀಠೋಪಕರಣ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಕಾಸರಗೋಡು ಜನರಲ್ ಆಸ್ಪತ್ರೆಯ ಮೂಲಸೌಕರ್ಯ ಅಭಿವೃದ್ಧಿಗೆ ಸಮಗ್ರ ಮಾಸ್ಟರ್ ಪ್ಲಾನ್ ತಯಾರಿಸಲು ಜಿಲ್ಲಾಧಿಕಾರಿ ಸೂಚಿಸಿದರು. ಶಿಥಿಲಗೊಂಡಿರುವ ಕಟ್ಟಡವನ್ನು ಕೆಡವಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಭೆ ಸೂಚಿಸಿದೆ.
ಶಾಸಕ ಕಲ್ಲಟ್ರ ಮಾಹಿನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ನಗರಸಭೆ ಅಧ್ಯಕ್ಷೆ ಶಾಹಿನಾ ಸಲೀಂ, ಕೆಡಿಪಿ ವಿಶೇಷಾಧಿಕಾರಿ ವಿ.ಚಂದ್ರನ್, ಉಪ ಡಿಎಂಒ ಡಾ.ಬಿ.ಸಂತೋಷ್, ಕಾಸರಗೋಡು ಜನರಲ್ ಆಸ್ಪತ್ರೆ ಆರ್.ಎಂ.ಒ ಡಾ.ಸಂಧ್ಯಾ, ಇಂಜಿನಿಯರ್ ಅನಿಲ್ ಕುಮಾರ್, ಗುತ್ತಿಗೆದಾರ ಮೊದಲಾದವರು ಭಾಗವಹಿಸಿದ್ದರು.




