HEALTH TIPS

ಮುಂದುವರಿದ ಸಂಘರ್ಷ: ಇರಾನ್‌ನ ವಿಮಾನ ನಿಲ್ದಾಣ, ಸೇತುವೆಗಳ ಮೇಲೆ ಅಮೆರಿಕ ದಾಳಿ

ವಾಷಿಂಗ್ಟನ್/ಟೆಹರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಶುಕ್ರವಾರ ಉಭಯ ದೇಶಗಳು ಪರಸ್ಪರ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. 


ಅಮೆರಿಕ ದಾಳಿಯನ್ನು ಮುಂದುವರಿಸಿದರೆ ಆಕ್ರಮಣಕಾರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಇರಾನ್‌ನ ಹಿರಿಯ ಸೇನಾ ಸಲಹೆಗಾರರು ಎಚ್ಚರಿಸಿದ್ದಾರೆ.

ಇರಾನ್‌ನ ಮಿಲಿಟರಿ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಅಮೆರಿಕದ ಪಡೆಗಳು ಸತತ ಏಳನೇ ರಾತ್ರಿಯೂ ಇರಾನ್ ಮೇಲೆ ದಾಳಿ ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ 'ಎಕ್ಸ್' (ಟ್ವಿಟರ್) ಖಾತೆಯಲ್ಲಿ ತಿಳಿಸಿದೆ.

ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಎರಡು ಪ್ರಮುಖ ಸೇತುವೆಗಳು ಸೇರಿದಂತೆ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಪಡೆಗಳು ದಾಳಿ ನಡೆಸಿವೆ ಎಂದು ಇರಾನ್ ಆರೋಪಿಸಿದೆ. ಅಲ್ಲದೆ, ಕೊಲ್ಲಿ ದೇಶಗಳಲ್ಲಿರುವ ಅಮೆರಿಕದ ಆಸ್ತಿಪಾಸ್ತಿಗಳ ಮೇಲೆಯೂ ದಾಳಿ ನಡೆಸಿರುವುದಾಗಿ ಇರಾನ್ ಹೇಳಿಕೊಂಡಿದೆ.

ಇರಾನ್‌ನ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಎಚ್ಚರಿಕೆ ನೀಡಿದ್ದರು. ಆದರೆ, ಶುಕ್ರವಾರ ನಡೆದಿರುವ ದಾಳಿಯಲ್ಲಿ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಲಾಗಿದೆಯೇ ಎಂಬುದರ ಕುರಿತು ಅಮೆರಿಕ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದೇ ವೇಳೆ, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಫೆಬ್ರುವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯೊಂದಿಗೆ ಈ ಯುದ್ಧ ಪ್ರಾರಂಭವಾಗಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್, ವಿಶ್ವದ ಬಹುಪಾಲು ತೈಲ ಸಾಗಣೆಯ ಪ್ರಮುಖ ಜಲಮಾರ್ಗವಾಗಿರುವ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಬಂದ್ ಮಾಡಿತ್ತು. ಅಲ್ಲದೆ ಗಲ್ಫ್ ಪ್ರದೇಶದಲ್ಲಿ ಇಸ್ರೇಲ್ ಮತ್ತು ಅಮೆರಿಕದ ನೆಲೆಗಳ ಮೇಲೆ ಸರಣಿ ದಾಳಿ ನಡೆಸಿತ್ತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries