HEALTH TIPS

ಧರ್ಮತ್ತಡ್ಕದಲ್ಲಿ ಮಾದಕ ವಸ್ತು ವಿರುದ್ಧ ವಿದ್ಯಾರ್ಥಿಗಳಿಗೆ ಜನಜಾಗೃತಿ

ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ಲ ವಲಯ ಹಾಗೂ ಜನಜಾಗೃತಿ ವೇದಿಕೆ ಜಂಟಿ ಆಶ್ರಯದಲ್ಲಿ ಮಾದಕ ವಸ್ತು ವಿರುದ್ಧ ವಿದ್ಯಾರ್ಥಿಗಳಿಗೆ ಜನಜಾಗೃತಿ ಮೂಡಿಸುವ ಸ್ವಾಸ್ತ್ಯ ಸಂಕಲ್ಪ ಆನ್ ಲೈನ್ ಕಾರ್ಯಕ್ರಮ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಯ್ಯರ್ ಸೆಕೆಂಡರಿ ಶಾಲೆಯಲ್ಲಿ ಜರುಗಿತು.    


ಶಾಲಾ ಪ್ಲಸ್ ಟು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕ್ಯಾಂಪ್ಕೋ ನಿರ್ದೇಶಕ ಸತೀಶ್ಚಂದ್ರ ಭಂಡಾರಿ ಸಮಾರಂಭ ಉದ್ಘಾಟಿಸಿದರು. ಶಾಲಾ ಪ್ರಬಂಧಕ ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದರು. ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ಲ ಅತಿಥಿಯಾಗಿ ಭಾಗವಹಿಸಿದ್ದರು.  ವಲಯ ಮೇಲ್ವಿಚಾರಕಿ ಜಯಶ್ರೀ, ಸೇವಾ ಪ್ರತಿನಿಧಿ ಚಂದ್ರಾವತಿ ಉಪಸ್ಥಿತರಿದ್ದರು. ಜನಜಾಗೃತಿ ವೇದಿಕೆ ಪೆರ್ಲ ವಲಯಾಧ್ಯಕ್ಷ ಬಿ. ಪಿ. ಶೇಣಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು.   ಶಾಲಾ ಪ್ರಾಂಶುಪಾಲ ಸತೀಶ್ ಶೆಟ್ಟಿ ಒಡ್ಡoಬೆಟ್ಟು ಸ್ವಾಗತಿಸಿ, ವಂದಿಸಿದರು. 

ಆನ್ ಲೈನ್ ಜಾಗೃತಿ ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪೆÇಲೀಸಧಿಕಾರಿ ಡಾ. ವೆಂಕಟೇಶ್ ಪ್ರಸನ್ನ ಮತ್ತು ಬೆಂಗಳೂರಿನ ಖ್ಯಾತ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಮಾದಕ ದ್ರವ್ಯಸೇವನೆಯಿಂದ ಆಗುವ ಹಾನಿ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆ,   ಹೇಮಾವತಿ ವಿ. ಹೆಗಡೆ ಶುಭ ಹಾರೈಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್ ಆಶಯ ಭಾಷಣ ಮಾಡಿದರು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries