ಅಹಮದಾಬಾದ್: ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಐದು ಮಂದಿಯನ್ನು ಗುಜರಾತ್‌ನ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಬಂಧಿತರನ್ನು ಬಿಲಾಲ್ ಅಬಿದ್ ಶೇರಾ, ಮೊಹಮ್ಮದ್ ಆಯೂಬ್ ಖಾಡಿವಾಲ್, ಮೊಹಮ್ಮದ್ ಶಾಫಿ ಮುಖಿ, ಮೊಹಮ್ಮದ್ ಹಸನ್ ಕರಾಡಿಯಾ ಮತ್ತು ಮೊಹಮ್ಮದ್ ಆಯೂಬ್ ಸುನಾಸರಾ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳು ಪಾಕ್ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಷ್-ಎ-ಮೊಹಮ್ಮದ್‌ನ ಸದಸ್ಯರಾಗಿದ್ದು, ಸ್ಫೋಟಕ ಸಾಧನಗಳನ್ನು ಪರೀಕ್ಷಿಸುವ ಕೃತ್ಯದಲ್ಲಿ ತೊಡಗಿದ್ದರು ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ತಿಂಗಳ ಆರಂಭದಲ್ಲಿ ಎಟಿಎಸ್ ಈ ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಿತ್ತು. ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ಸಂಪರ್ಕಿಸಿ, ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತಿದ್ದರು ಎನ್ನಲಾಗಿದೆ.
ಆರೋಪಿಗಳು ಪಾಕ್‌ನ ಹ್ಯಾಂಡ್ಲರ್‌ಗಳಾದ ಅಬ್ದುಲ್ಲಾ ಮತ್ತು ಮೊಹಮ್ಮದ್ ಉಮರ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಆರೋಪಿಸಿದೆ.

