ಕಾಸರಗೋಡು: ಕೆಎಸ್ಸಾರ್ಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಯೋಜನೆ ಸರ್ಕಾರದ ನೀತಿಯಾಗಿದ್ದು, ಈ ವಿಷಯದಲ್ಲಿ ಬಡ ಮತ್ತು ವೃದ್ಧ ಮಹಿಳೆಯರ ನಡುವೆ ಯಾವುದೇ ತಾರತಮ್ಯ ಮಾಡಲಾಗುವುದಿಲ್ಲ ಎಂದು ಸಾರಿಗೆ ಸಚಿವ ಸಿ.ಪಿ. ಜಾನ್ ತಿಳಿಸಿದ್ದಾರೆ. ಅವರು ಕಾಸರಗೋಡಿನ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. 'ಪ್ರಿಯದರ್ಶಿನಿ' ಬಸ್ ಸೇವೆಗೆ ಸಂಬಂಧಿಸಿದಂತೆ ಖಾಸಗಿ ಬಸ್‍ಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಲು ಸಮಿತಿಯೊಂದನ್ನು ರಚಿಸಲಾಗುವುದು.
ಖಾಸಗಿ ಬಸ್ ವಲಯವನ್ನು ಕಳೆದ ಹತ್ತು ವರ್ಷಗಳಿಂದ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಾ ಬಂದಿರುವುದರಿಂದ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದ್ದು, ಸರ್ಕಾರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ತಿಳಿಸಿದರು.
ಆಸ್ಪತ್ರೆ ನಿರ್ವಹಣಾ ಸಮಿತಿಗಳ ಮಾದರಿಯಲ್ಲಿ ಪ್ರತಿ ಡಿಪೆÇೀದಲ್ಲಿಯೂ 'ಸಾರಿಗೆ ನಿರ್ವಹಣಾ ಸಮಿತಿ'ಯನ್ನು ರಚಿಸಲು ಆದೇಶ ಹೊರಡಿಸಲಾಗಿದ್ದು, ಈ ಸಮಿತಿಯ ಜವಾಬ್ದಾರಿಯನ್ನು ಶಾಸಕರಿಗೆ ವಹಿಸಲಾಗುವುದು. ಸಮಿತಿಯಲ್ಲಿ ನಗರಸಭೆ ಮತ್ತು ಮಹಾನಗರ ಪಾಲಿಕೆಗಳ ಸದಸ್ಯರನ್ನೂ ಒಳಪಡಿಸಿಕೊಳ್ಳಲಾಗುವುದು.
'ಪ್ರಿಯದರ್ಶಿನಿ' ಉಚಿತ ಬಸ್ ಪ್ರಯಾಣ ಯೋಜನೆಯು ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್‍ಗಳು ಕಾರ್ಯನಿರ್ವಹಿಸುವ ಪ್ರದೇಶಗಳಿಂದ ಬರುವ ದೂರುಗಳನ್ನು ನಿರ್ದಿಷ್ಟವಾಗಿ ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.



