HEALTH TIPS

ಸಿಇಒ ಅಧಿಕಾರವನ್ನು ರಾಮ ಮಂದಿರ ಟ್ರಸ್ಟ್ ನಿರ್ಧರಿಸುತ್ತೆ, ಸರ್ಕಾರವಲ್ಲ: ಮಿಶ್ರಾ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ (ಸಿಇಒ) ಅಧಿಕಾರ ಮತ್ತು ಜವಾಬ್ದಾರಿಗಳು ಏನು ಎಂಬುದನ್ನು ದೇವಾಲಯದ ಟ್ರಸ್ಟ್‌ ನಿರ್ಧಾರ ಮಾಡುತ್ತದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವೇನೂ ಇರುವುದಿಲ್ಲ ಎಂದು (ರಾಮ ಮಂದಿರ) ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಭಾನುವಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಯೋಧ್ಯೆಗೆ ಭೇಟಿ ನೀಡುವ ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ದೇವಾಲಯ, ಟ್ರಸ್ಟ್‌ ಮೇಲೆ ಭಕ್ತರು ಹೊಂದಿರುವ ನಂಬಿಕೆಯನ್ನು ಎತ್ತಿ ಹಿಡಿಯುವುದು ಸಿಇಒ ಅವರ ಪ್ರಾಥಮಿಕ ಜವಾಬ್ದಾರಿಯಾಗಲಿರಲಿದೆ ಎಂದಿದ್ದಾರೆ.

'ಸಿಇಒ ಹಣಕಾಸು ವ್ಯವಸ್ಥೆಗಳ ಮೇಲ್ವಿಚಾರಣೆಯನ್ನೂ ನೋಡಿಕೊಳ್ಳುತ್ತಾರೆ' ಎಂದ ಮಿಶ್ರಾ, ಟ್ರಸ್ಟ್‌ ಅಥವಾ ಸಿಇಒ ಕಾರ್ಯನಿರ್ವಹಣೆ ವಿಚಾರದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಸಿಇಒ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡುವಂತೆ ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದಿದ್ದಾರೆ.

'ಸಿಇಒಗೆ ಏನು ಮತ್ತು ಎಷ್ಟು ಅಧಿಕಾರ ನೀಡಬೇಕು, ಸಿಬ್ಬಂದಿ ನೇಮಿಸುವ ಹೊಣೆ ಯಾರದ್ದು ಎಂಬುದನ್ನು ನಿರ್ಧರಿಸುವುದು ಟ್ರಸ್ಟ್‌ಗೆ ಬಿಟ್ಟ ವಿಚಾರ. ಎಲ್ಲವೂ ಟ್ರಸ್ಟ್‌ ವ್ಯಾಪ್ತಿಯಲ್ಲೇ ನಡೆಯುತ್ತದೆ' ಎಂದು ಒತ್ತಿ ಹೇಳಿದ್ದಾರೆ.

ಸಿಇಒ ಹುದ್ದೆಗೆ ಸೂಕ್ತ ಅಭ್ಯರ್ಥಿಯನ್ನು ಶಿಫಾರಸು ಮಾಡುವಂತೆ ನಿವೃತ್ತ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ, ನಿವೃತ್ತ ಲೆಫ್ಟಿನೆಂಟ್ ಜನರಲ್ ವಿಷ್ಣುಕಾಂತ್ ಚತುರ್ವೇದಿ ಮತ್ತು ಎನ್‌ಐಟಿ ರಾಯ್‌ಪುರದ ಮಾಜಿ ಅಧ್ಯಕ್ಷ ಸುರೇಶ್ ಹವಾರೆ ಅವರನ್ನೊಳಗೊಂಡ ಮೂವರು ಸದಸ್ಯರ ಸಮಿತಿಯನ್ನು ರಾಮ ಮಂದಿರ ಟ್ರಸ್ಟ್ ಜುಲೈ 6 ರಂದು ಟ್ರಸ್ಟ್ ರಚಿಸಿದೆ.

ಈ ಸಮಿತಿಯ ಸಭೆಗಳಿಗೆ ತಾವು ಹಾಜರಾಗುವುದಿಲ್ಲ ಎಂಬುದನ್ನೂ ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಮುಂದುವರಿದು, ರಾಮ ಮಂದಿರ ದೇವಾಯಲಕ್ಕೆ ಭೇಟಿ ನೀಡುವ ಭಕ್ತರಿಂದ ಈವರೆಗೆ ಯಾವುದೇ ದೂರುಗಳು ಕೇಳಿಬಂದಿಲ್ಲ. ಅವರಿಂದ ಸಕಾರಾತ್ಮಕ ಪ್ರತಿಸ್ಪಂದನೆ ಸಿಕ್ಕಿದೆ ಎಂದಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries