HEALTH TIPS

ಗೃಹಿಣಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ:  ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಲ್ಕ ನಿವಾಸಿ ನಾರಾಯಣ ಎಂಬವರ ಪತ್ನಿಯೂ ಕಳೆದ ಕೆಲವು ವರ್ಷಗಳಿಂದ ಬೀಜದಕಟ್ಟೆಯ ತಾಯಿ ಮನೆಯಲ್ಲಿ ವಾಸಿಸುತ್ತಿದ್ದ ಲಕ್ಷ್ಮಿ ಯಾನೆ ನಳಿನಿ (60) ಎಂಬವರು ಮೃತಪಟ್ಟ ಮಹಿಳೆ. ಶುಕ್ರವಾರ ರಾತ್ರಿ ಲಕ್ಷ್ಮಿ ಊಟಮಾಡಿ ನಿದ್ರಿಸಿದ್ದರು. ಶನಿವಾರ ಬೆಳಿಗ್ಗೆ ಮನೆಯವರು ಎದ್ದು ನೋಡಿದಾಗ ಮನೆ ಸಮೀಪದ ಕೊಟ್ಟಿಗೆಯಲ್ಲಿ ಇವರು ನೇಣುಬಿಗಿದು ಸಾವಿಗೀಡಾಗಿರುವುದು ಕಂಡುಬಂದಿದೆ. ಈ ಬಗ್ಗೆ ಮನೆಯವರು ನೀಡಿದ ದೂರಿನಂತೆ ಬದಿಯಡ್ಕ ಪೋಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮೃತದೇಹ ವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು  ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರು ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries