ಮಂಜೇಶ್ವರ: ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿವಿಧ ಕ್ಲಬ್‍ಗಳ ಉದ್ಘಾಟನೆ ಮತ್ತು ಪ್ರೇರಣಾ ತರಗತಿ ನಡೆಯಿತು. ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ ನಿರ್ಮಲ್ ಕುಮಾರ್ ಅವರು ಕ್ಲಬ್‍ಗಳ ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳಿಗೆ ಪ್ರೇರಣ ತರಗತಿ ನಡೆಸಿಕೊಟ್ಟರು.
ಈ ಸಂದರ್ಭ ಮಾತನಾಡಿದ ಅವರು, ಪರೀಕ್ಷೆಗಳಲ್ಲಿ ಎ ಪ್ಲಸ್ ಅಂಕ ಪಡೆಯುವುದರ ಜತೆಗೆ, ಜೀವನದಲ್ಲಿ ಎ ಪ್ಲಸ್ ಆಗಲು ವಿದ್ಯಾರ್ಥಿಗಳು ಶ್ರಮಿಸಬೇಕು. ಕಲಿಕೆಯ ಜೊತೆಗೆ ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ಇಂತಹ ಕ್ಲಬ್‍ಗಳು ಸಹಕಾರಿ ಎಂದು ತಿಳಿಸಿದರು.
ಮಾತೃ ಸಂಘದ ಅಧ್ಯಕ್ಷ ಸೌಮ್ಯಾ, ಪಿಟಿಎ ಕಾರ್ಯಕಾರಿ ಸಮಿತಿ ಸದಸ್ಯ ಅಹಮದ್‍ಕುಞÂ, ರಿಯಾನಾ, ಸಾಜಿದ ಉಪಸ್ಥಿತರಿದ್ದರು.ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮೋಹನ ಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಕ್ಕøಷ್ಣವೇಣಿ ಬಿ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ವಂದಿಸಿದರು.



