ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ವಾಚನಾ ಮಾಸಾಚರಣೆಯ ಸಮಾರೋಪ ಸಮಾರಂಭ ಹಾಗೂ ಬಾಲ ಸಭೆ ಜರಗಿತು.
ಮುಖ್ಯ ಅತಿಥಿಯಾಗಿ ಸಾಹಿತಿ ನಾರಾಯಣ ಪೆರಡಾಲ ಮಕ್ಕಳ ಹಸ್ತಪತ್ರಿಕೆ 'ಕಾನನ'ವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಷ್ಣು ಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ಮಾತೃಸಂಘದ ಅಧ್ಯಕ್ಷೆ ಪ್ರೀತಾ ಕಿಳಿಂಗಾರು ಶುಭ ಹಾರೈಸಿದರು. ಮುಖ್ಯೋಪಾಧ್ಯಾಯಿನಿ ಶ್ರೀವಿದ್ಯಾ ಹಾಗೂ ಶಿಕ್ಷಕ-ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಾಚನಾ ಮಾಸಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ವಿದ್ಯಾರ್ಥಿನಿ ಸಾನ್ವಿ ಸ್ವಾಗತಿಸಿ ಪ್ರತೀಕ್ಷಾ ವಂದಿಸಿದರು. ವಿದ್ಯಾರ್ಥಿಗಳಾದ ವೈಷ್ಣವ್ ಭಟ್ ಹಾಗೂ ವೈಶಾಲಿ ಕೆ ಯಂ ನಿರೂಪಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.

.jpg)
.jpg)
