ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜರಗುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ತಮ್ಮ ದಿವ್ಯಹಸ್ತದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕಾರ್ಮಾರು ಶ್ರೀ ಮಹಾವಿಷ್ಣು ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹೇಶ್ ವಳಕುಂಜ, ಟ್ರಸ್ಟಿ ಸುಂದರ ಶೆಟ್ಟಿ ಕೊಲ್ಲಂಗಾನ, ಯುವಕ ವೃಂದದ ಅಧ್ಯಕ್ಷ ಪುರುಷೋತ್ತಮ ಕಾರ್ಮಾರು, ಕೋಶಾಧಿಕಾರಿ ಶಶಿಕಾಂತ ಶೆಟ್ಟಿ ಕಾರ್ಮಾರು, ಕೃಷ್ಣಕುಮಾರ್ ಚುಕ್ಕಿನಡ್ಕ ಜೊತೆಗಿದ್ದರು.

.jpg)
