ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಕಾಸರಗೋಡು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಕಾಸರಗೋಡು ನೇತೃತ್ವದಲ್ಲಿ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಪೆರಡಾಲ ನವಜೀವನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿ ಸಿ ಕಾರ್ಯಕ್ರಮವನ್ನು ಕೇಂದ್ರ ಕಚೇರಿಯಿಂದ ಹಮ್ಮಿಕೊಳ್ಳಲಾಯಿತು.
ಶಾಲಾ ಮುಖ್ಯ ಅಧ್ಯಾಪಿಕೆ ಜಾಹಿದ ಬೀವಿ ದೀಪ ಬೆಳಗಿಸಿ ಚಾಲನೆ ನೀಡಿದರು. ಅಖಿಲ ಕರ್ನಾಟಕ ಜನಜಾಗೃತಿ, ತಾಲೂಕು ಅಧ್ಯಕ್ಷ ಪಡುಮಲೆ ಜಯರಾಮ್ ಪಾಟಾಳಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಅಧ್ಯಾಪಕರಾದ ಪ್ರಸನ್ನ ಹಾಗೂ ಹರೀಶ್, ತಾಲೂಕಿನ ಹಣಕಾಸು ಪ್ರಬಂಧಕ ಶ್ರೇಯಸ್, ವಲಯ ಮೇಲ್ವಿಚಾರಕಿ ಸುಗುಣ ಓ ಹವಲ್ದಾರ್, ಸೇವಾಪ್ರತಿನಿಧಿ ಪ್ರಪುಲ್ಲ, ಜ್ಯೋತಿ, ಜಲಜಾಕ್ಷಿ ಉಪಸ್ಥಿತರಿದ್ದರು. ನೂರಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

.jpg)
