HEALTH TIPS

ಕುಂಬಳೆ ಶಾಲಾ ವಿದ್ಯಾರ್ಥಿಯ ರ್ಯಾಗಿಂಗ್ ಯತ್ನ-ಗಾಯಾಳು ಬಾಲಕ ಆಸ್ಪತ್ರೆಗೆ ದಾಖಲು

ಕುಂಬಳೆ: ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಒಂಬತ್ತನೇ ತರಗತಿ ವಿದ್ಯಾರ್ಥಿಗೆ ಪೇಟೆಯಲ್ಲಿ ಹಿರಿಯವಿದ್ಯಾರ್ಥಿಗಳ ತಂಡವೊಂದು ರ್ಯಾಗಿಂಗ್ ನಡೆಸಿ, ಥಳಿಸಿದ ಘಟನೆ ನಡೆದಿದೆ. ಬುಧವರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯನ್ನು ಹತ್ತನೇ ತರಗತಿಯ ಹತ್ತರಷ್ಟು ವಿದ್ಯಾರ್ಥಿಗಳು ಹಿಂಬಾಲಿಸಿ ತಡೆಹಿಡಿದು ಥಳಿಸಿದೆ. ನಂತರ ವಾಹನದ ಕೀಲಿಕೈಯಯಿಂದ ಚುಚ್ಚಿ ಗಾಯಗೊಳಿಸಿದೆ. ಗಾಯಾಳು, ಒಳಯಂ ನಿವಾಸಿಯಾಗಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದು ಪೊಲೀಸರು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳ ಗುಂಪನ್ನು ಚದುರಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಗುಂಪೊಂದು ಪುಂಡಾಟಿಕೆ ನಡೆಸುತ್ತಾ ಬರುತ್ತಿದ್ದು, ಶಾಲಾ ಅಧಿಕಾರಿಗಳು, ಪಿಟಿಎ ಇಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗದಿರುವುದರಿಂದ ಸಮಸ್ಯೆ ಮರುಕಳಿಸುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries