ಕಾಸರಗೋಡು: ಇಲಿ ವಿಷ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೂಡ್ಲು, ಚೆಟ್ಟುಂಗುಯಿ ಇಜ್ಜತ್ ನಗರದ ಎಸ್‍ಎಂ ಮಂಜಿಲ್‍ನ ಅಬ್ದುಲ್ ಮನಾಫ್ ಎಂಬವರ ಪುತ್ರಿ ಆಮಿನಾ ನುಸಾ (18)ಸೋಮವಾರ ಮೃತಪಟ್ಟಿದ್ದಾರೆ.
ಜೂನ್ 25 ರಂದು ಆಮಿನಾ ನುಸಾ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ಚೆಂಗಳ, ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಉನ್ನತ ಚಿಕಿತ್ಸೆಗಾಗಿ ಕೋಯಿಕ್ಕೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ನಗರಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.


