ಕಾಸರಗೋಡು: ರೈಲು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ವೆಳ್ಳಿಕ್ಕೋತ್ ಆಲಂಗಿಲ್ ನಿವಾಸಿ ಅನೀಶ್ (37)ಶುಕ್ರವಾರ ಮೃತಪಟ್ಟಿದ್ದಾರೆ. ಹೊಸಕೋಟೆಯ ತರಕಾರಿ ಅಂಗಡಿ ಯಲ್ಲಿ ನೌಕರನಾಗಿದ್ದ ಅನೀಶ್ ಅವರು ಕಾಞಂಗಾಡ್ ಕುಶಾಲನಗರದಲ್ಲಿ ರೈಲು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದ್ದರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಹಾಯದಿಂದ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ, ಮತ್ತೆ ಕಾಞಂಗಾಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

