HEALTH TIPS

ಒಂಬತ್ತು ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

 ಕೊಲಂಬೊ: ತನ್ನ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಭಾರತದ ಏಳು ಮೀನುಗಾರರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.


ಇರನಾಟಿವು ದಕ್ಷಿಣ ಭಾಗದ ಶ್ರೀಲಂಕಾ ಜಲಪ್ರದೇಶಕ್ಕೆ 50ಕ್ಕೂ ಹೆಚ್ಚು ಭಾರತೀಯ ಮೀನುಗಾರಿಕಾ ದೋಣಿಗಳು ಅಕ್ರಮವಾಗಿ ನುಗ್ಗಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಶ್ರೀಲಂಕಾ ನೌಕಾಪಡೆ ಕಾರ್ಯಾಚರಣೆ ನಡೆಸಿ ಈ ಬಂಧನ ನಡೆಸಿದೆ.

ಈ ಸಂಬಂಧ ಒಂಬತ್ತು ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, ಅವರು ಬಳಸುತ್ತಿದ್ದ ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 15ರವರೆಗಿನ ಅಂಕಿಅಂಶಗಳ ಪ್ರಕಾರ, ಶ್ರೀಲಂಕಾ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಒಟ್ಟು 128 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದ್ದು, 18 ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಮಿಳುನಾಡು ಮತ್ತು ಶ್ರೀಲಂಕಾವನ್ನು ಬೇರ್ಪಡಿಸುವ ಪಾಕ್ ಜಲಸಂಧಿಯು ಉಭಯ ದೇಶಗಳ ಮೀನುಗಾರರಿಗೆ ಸಮೃದ್ಧ ಮೀನುಗಾರಿಕಾ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಸಾಗರ ಗಡಿರೇಖೆಯನ್ನು ಉಲ್ಲಂಘಿಸಿದ ಆರೋಪದಡಿ ಮೀನುಗಾರರು ಪದೇ ಪದೇ ಬಂಧನಕ್ಕೊಳಗಾಗುತ್ತಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries