HEALTH TIPS

ಹಿಮಾಚಲಪ್ರದೇಶದಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು, ರಸ್ತೆಗಳು ಜಲಾವೃತ

 ನಹಾನ್: 36 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶದ ನಹಾನ್ ಜಿಲ್ಲೆಯ ಹಲವು ಭಾಗಗಳಲ್ಲಿ ವ್ಯಾಪಕ ಹಾನಿ ಉಂಟಾಗಿದೆ. ಹಲವೆಡೆ ನೀರು ನಿಂತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಹಾನ್ ಜಿಲ್ಲೆಯ ಕೆಲವೆಡೆ ಭೂಕುಸಿತ ಸಂಭವಿಸಿದೆ. 


ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿರ್ಮೌರ್ ಜಿಲ್ಲೆಯ ಪ್ರಮುಖ ನದಿಗಳಾದ ಟಾನ್ಸ್, ಯಮುನಾ, ಬಾಟಾ, ಗಿರಿ ಮತ್ತು ಮಾರ್ಕಂಡ ಸೇರಿದಂತೆ ಹಲವರು ತೊರೆಗಳು ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ವ್ಯಾಪಕ ಮಳೆಯಿಂದಾಗಿ ಶಿಲ್ಲೈ ಉಪವಿಭಾಗದಲ್ಲಿ 21, ಸಂಗ್ರಾದಲ್ಲಿ 8, ನಹಾನ್‌ನಲ್ಲಿ 4 ಮತ್ತು ರಾಜ್‌ಗಢದಲ್ಲಿ 1 ಸೇರಿದಂತೆ ಒಟ್ಟು 34 ರಸ್ತೆಗಳು ಸಂಪೂರ್ಣ ಬಂದ್ ಆಗಿವೆ ಎಂದು ವರದಿಯಾಗಿದೆ.

ಶುಕ್ರವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿರ್ಮೌರ್ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries