HEALTH TIPS

ಪತ್ನಿಗೆ ಪೋಷಕರ ನೆರವಿದ್ದರೂ ಜೀವನಾಂಶ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಪ್ರಯಾಗರಾಜ್‌: ವಿಚ್ಛೇದಿತ ಮಹಿಳೆಗೆ ತಂದೆ-ತಾಯಿಯಿಂದ ಆರ್ಥಿಕ ನೆರವು ದೊರೆಯುತ್ತದೆ ಎಂಬ ಕಾರಣಕ್ಕೆ ಪತಿಯು ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್ ಹೇಳಿದೆ.

ಬುಲಂದ್‌ಶಹರ್‌ನ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆ ಮತ್ತು ಆಕೆಯ ಅಪ್ರಾಪ್ತ ವಯಸ್ಸಿನ ಇಬ್ಬರು ಮಕ್ಕಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಮೇಲಿನ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ನ್ಯಾಯಮೂರ್ತಿ ಗರೀಮಾ ಪ್ರಸಾದ್‌ ಅವರು, 'ಸಿಆರ್‌ಪಿಸಿಯ ಸೆಕ್ಷನ್‌ 125ರ ಅಡಿಯಲ್ಲಿ ಪತ್ನಿಯ ಪೋಷಕರು ಆಕೆಗೆ ಆರ್ಥಿಕವಾಗಿ ನೆರವಾಗಿದ್ದಾರೆ ಎಂಬ ಕಾರಣಕ್ಕಾಗಿ ಪತಿಯು ಆಕೆಗೆ ಜೀವನಾಂಶ ನೀಡಲು ನಿರಾಕರಿಸುವಂತಿಲ್ಲ' ಎಂದು ಹೇಳಿದರು. ಬಳಿಕ ಪತ್ನಿಗೆ ಜೀವನಾಂಶವಾಗಿ ಪ್ರತಿ ತಿಂಗಳು ₹5,000 ಮತ್ತು ಮಕ್ಕಳ ಪಾಲನೆ ಪೋಷಣೆಗಾಗಿ ತಲಾ ₹4,000 ನೀಡಲು ಆದೇಶಿಸಿದರು.

ಕೌಟುಂಬಿಕ ನ್ಯಾಯಾಲಯವು 2023ರ ಡಿಸೆಂಬರ್‌ನಲ್ಲಿ, 'ಮಕ್ಕಳ ಪಾಲನೆ ಪೋಷಣೆಗಾಗಿ ಪ್ರತಿ ಮಗುವಿಗೆ ₹3,000ದಂತೆ ಜೀವನಾಂಶ ನೀಡಬೇಕು' ಎಂದು ಆದೇಶಿಸಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries