ಕಾಸರಗೋಡು: ಲೈಟ್ ಹೌಸ್ ಬಳಿಯ ಸಮುದ್ರ ಕಿನಾರೆಯಲ್ಲಿ ಪತ್ತೆಯಾದ ಪುರುಷ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿ ನಿಗೂಢತೆ ಮುಂದುವರಿದಿದ್ದು, ಮೃತ ವ್ಯಕ್ತಿಯ ಮಾಹಿತಿ ಅಲಭ್ಯವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಶರೀರದಿಂದ ರುಂಡ ಬೇರ್ಪಟ್ಟಿರುವುದು ಹೆಚ್ಚಿನ ನಿಗೂಢತೆಗೆ ಕಾರಣವಾಗಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತ ವ್ಯಕ್ತಿಯ ಮಾಹಿತಿ ಲಭ್ಯವಾಗದಿದ್ದಲ್ಲಿ, ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಸಂಸ್ಕಾರ ನಡೆಸಲು ಪೆÇಲೀಸರು ತೀರ್ಮಾನಿಸಿದ್ದಾರೆ. ಇದೇ ಸಂದರ್ಭ ತನಿಖೆ ನಿಟ್ಟಿನಲ್ಲಿ ಜಿಲ್ಲೆಯಿಂದ ನಾಪತ್ತೆಯಾದವರ ಕುರಿತು ಪೆÇಲೀಸರು ಮಾಹಿತಿ ಸಂಗ್ರಹಿಸಲಾರಂಭಿಸಿದ್ದಾರೆ.

