ಪೆರ್ಲ: ಕಾಟುಕುಕ್ಕೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ವನ್ ವಿದ್ಯಾರ್ಥಿಗಳ ಪ್ರವೇಶೋತ್ಸವ ಸೋಮವಾರ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಈ ಸಂಬಂಧ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಪ್ರಬಂಧಕ ಮಿತ್ತೂರು ಪುರುಷೋತ್ತಮ ಭಟ್ ಅಧ್ಯಕ್ಷತೆ ವಹಿಸಿದ್ದರು. ದಾನಿ, ಉದ್ಯಮಿ ರಾಮಪ್ರಸಾದ್ ರೈ ಪ್ರವೇಶೋತ್ಸವ ಹಾಗೂ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಮಲ್ಟಿಮೀಡಿಯಾ ಕೊಠಡಿಯನ್ನು ಉದ್ಘಾಟಿಸಿದರು. ಶಾಲಾ ಹಳೆ ವಿದ್ಯಾರ್ಥಿ ಹಾಗೂ ಪುತ್ತಿಗೆ ಗ್ರಾ.ಪಂ.ಅಧ್ಯಕ್ಷೆ ಆಯಿಷಾ ಶಹಮಾ ಫಿದಾ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಹಾರೈಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯರಾದ ಬಿ.ಎಸ್.ಗಾಂಭೀರ್, ವಿನೋಬಾ ಶೆಟ್ಟಿ ದಂಬೆಕಾನ, ಲೋಕನಾಥ ಶೆಟ್ಟಿ, ಸಂದೇಶ ರೈ, ಹೈಸ್ಕೂಲು ಮುಖ್ಯೋಪಾಧ್ಯಾಯ ಹರಿಪ್ರಸಾದ್ ಶೆಟ್ಟಿ, ಪಿಟಿಎ ಅಧ್ಯಕ್ಷ ಸುಧಾಕರ ಕಲ್ಲಗದ್ದೆ ಉಪಸ್ಥಿತರಿದ್ದು ಶುಭಾಶಂಸನೆಗೈದರು. ಪ್ಲಸ್ ವನ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು, ಪ್ಲಸ್ ಟು ವಿದ್ಯಾರ್ಥಿಗಳು, ಮಕ್ಕಳ ಹೆತ್ತವರು, ಸ್ಥಳೀಯರು ಉಪಸ್ಥಿತರಿದ್ದರು. ಪ್ರಾಂಶುಪಾಲ ಪದ್ಮನಾಭ ಶೆಟ್ಟಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂದೀಪ್ ಕುಮಾರ್ ಎನ್.ವಿ.ಸ್ವಾಗತಿಸಿ, ಕೃಷ್ಣ ಕುಮಾರಿ ಪಿ. ವಂದಿಸಿದರು. ವಾಣಿ ಕೆ. ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭ ಕಳೆದ ಸಾಲಿನ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಉನ್ನತ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

.jpg)
.jpg)
.jpg)
