ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದರು ಧರಣಿ ಕುಳಿತಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹಾಗೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೊಚ್ ಜನತಾ ಪಕ್ಷದ (ಸಿಜೆಪಿ) ಜೂನ್ 20ರಿಂದ ಪ್ರತಿಭಟನೆ ನಡೆಸುತ್ತಿದೆ.
ಸಿಜೆಪಿ ನೇತೃತ್ವದಲ್ಲಿ ಜುಲೈ 20ರಂದು ನಡೆಯುತ್ತಿದ್ದ 'ಸಂಸತ್ ಚಲೊ' ಪ್ರತಿಭಟನಾ ಮೆರವಣಿಗೆಯಲ್ಲಿ ಶಾಂತಿಯುತವಾಗಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ನಡೆಸಿದ್ದರು.
ಇದನ್ನು ಖಂಡಿಸಿ, ರಾಹುಲ್ ಗಾಂಧಿ, ಕರ್ನಾಟಕ ಹಾಗೂ ಕೇರಳ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆಗೆ ಧುಮುಕಿದ್ದರು. ಇಂದು (ಜುಲೈ 21) ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ನಿವಾಸದ ಎದರು ಧರಣಿ ಆರಂಭವಾಗಿತ್ತು. ಅಖಿಲೇಶ್ ಕೂಡ ಸಾಥ್ ನೀಡಿದ್ದರು.
ಸ್ಥಳಕ್ಕೆ ಬಂದ ಪೊಲೀಸರು, ಧರಣಿ ಕುಳಿತಿದ್ದ ನಾಯಕರನ್ನು ಬಲವಂತವಾಗಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ರಾಹುಲ್ ಅವರ ಕಣ್ಣಿನ ಕೆಳಭಾಗಕ್ಕೆ ಗಾಯವಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

