HEALTH TIPS

ಜನನ-ಮರಣ ನೋಂದಣಿ ವಿಳಂಬಿಸಿದರೆ ಸಂಕಷ್ಟ: ಹೊಸ ಮಸೂದೆ ಜಾರಿಗೆ ಸರ್ಕಾರ ಸಿದ್ಧತೆ

ನವದೆಹಲಿ: ಜನನ ಅಥವಾ ಮರಣ ನೋಂದಣಿ ಮಾಡಿಸುವ ಕಾರ್ಯವನ್ನು ವಿಳಂಬ ಮಾಡಿದರೆ, ಮುಂದೆ ಈ ಪ್ರಕ್ರಿಯೆ ಹೆಚ್ಚು ಕಠಿಣವಾಗಲಿದೆ. ಈ ಸಂಬಂಧ ಹೊಸ ಮಸೂದೆಯನ್ನು ಜಾರಿಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. 

ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ-2026'ಯ ಪ್ರತಿಯನ್ನು ಸಂಸದರಿಗೆ ವಿತರಿಸಲಾಗಿದ್ದು, ಸರ್ಕಾರವು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸಲು ತಯಾರಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಜನನ ಅಥವಾ ಮರಣವನ್ನು ಎರಡು ವರ್ಷಗಳ ನಂತರ ನೋಂದಾಯಿಸಲು ಮುಂದಾದರೆ, ಪ್ರಥಮ ದರ್ಜೆ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ಅವರ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೊಸ ಮಸೂದೆ ತಿಳಿಸಿದೆ.

ಮಸೂದೆಯ ಪ್ರಕಾರ, ಒಂದರಿಂದ ಎರಡು ವರ್ಷಗಳ ನಡುವಿನ ಅವಧಿಯಲ್ಲಿ ಜನನ ಮತ್ತು ಮರಣವನ್ನು ನೋಂದಾಯಿಸಬೇಕಾದರೆ ಆ ಪ್ರದೇಶದ ಜಿಲ್ಲಾ ಮ್ಯಾಜಿಸ್ಟ್ರೇಟ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅಥವಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರ ಅನುಮೋದನೆ ಪಡೆಯುವುದು ಅಗತ್ಯವಾಗಿರುತ್ತದೆ.

ನೋಂದಣಿಯನ್ನು ಎರಡು ವರ್ಷಗಳಿಗಿಂತ ಹೆಚ್ಚು ವಿಳಂಬಗೊಳಿಸುವವರಿಗೆ, ಪ್ರಥಮ ದರ್ಜೆ ಜುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ಅವರ ಒಪ್ಪಿಗೆಯ ಅಗತ್ಯವಿರುತ್ತದೆ.

ಎರಡೂ ಸಂದರ್ಭಗಳಲ್ಲಿ, ನಿಯೋಜಿತ ಅಧಿಕಾರಿಯು ಜನನ ಅಥವಾ ಮರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗುತ್ತದೆ. ತಡವಾದ ನೋಂದಣಿಗೆ ಶುಲ್ಕವನ್ನೂ ನಿಗದಿಪಡಿಸಲಾಗುತ್ತದೆ.

ಈಗ ಚಾಲ್ತಿಯಲ್ಲಿರುವ ನಿಯಮದ ಪ್ರಕಾರ, ಒಂದು ವರ್ಷಕ್ಕಿಂತ ಹೆಚ್ಚು ವಿಳಂಬವಾದ ಎಲ್ಲಾ ನೋಂದಣಿಗಳಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಅಥವಾ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರ ಅನುಮೋದನೆ ಪಡೆಯುವುದು ಅಗತ್ಯವಾಗಿರುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries