ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ ಆರೋಗ್ಯ ಕೇಂದ್ರದ ವತಿಯಿಂದ ಪಲ್ಸ್ ಪೊಲೀಯೋ ಲಸಿಕೆ ಭಾನುವಾರ ವಿವಿಧ ಕೇಂದ್ರಗಳಲ್ಲಿ ನೀಡಲಾಯಿತು. ಪೂರ್ವಭಾವಿ ಸಿದ್ಧತಾ ಸಭೆ ಶನಿವಾರ ಬದಿಯಡ್ಕ ಕುಟುಂಬ ಆರೋಗ್ಯ ಕೇಂದ್ರದಲ್ಲಿ ಜರಗಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಉದ್ಘಾಟಿಸಿ ಮಾತನಾಡಿದರು.
ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿಸಮಿತಿ ಅದ್ಯಕ್ಷೆ ರಜನಿ ಜಿ.ಆರ್., ವಿವಿಧ ವಾರ್ಡುಗಳ ಸದಸ್ಯರು ಪಾಲ್ಗೊಂಡಿದ್ದರು. ಅರೋಗ್ಯ ಇಲಾಖೆಯ ರಾಜೇಶ್ ಸ್ವಾಗತಿಸಿ, ಅಂಬಿಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

.jpg)
