HEALTH TIPS

ಪ್ರಧಾನ್ ನಿರ್ಗಮನ: ಮೋದಿ ಸರ್ಕಾರದಲ್ಲಿ ಅಪರೂಪದ ರಾಜೀನಾಮೆ ಪ್ರಸಂಗ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಧರ್ಮೇಂದ್ರ ಪ್ರಧಾನ್ ಅವರಿಗೂ ಮುನ್ನ ಸಾರ್ವಜನಿಕ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದ ಸಚಿವರೆಂದರೆ ಎಂ.ಜೆ. ಅಕ್ಬರ್. 2014ರಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಸಚಿವರಾಗಿದ್ದಾಗಲೇ ರಾಜೀನಾಮೆ ನೀಡಿದವರು ಇಬ್ಬರು ಮಾತ್ರ. 


ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ನೀಡಿರುವ ರಾಜೀನಾಮೆ ರಾಜಕೀಯ ವಲಯದಲ್ಲಿ ಪ್ರಮುಖ ವಿದ್ಯಮಾನವಾಗಿ ಹೊರಹೊಮ್ಮಿದೆ. ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿಲ್ಲ, ಬದಲಿಗೆ ಅವರೇ ಪರಿಸ್ಥಿತಿಯ ನೈತಿಕ ಹೊಣೆ ಹೊತ್ತು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ವಿದ್ಯಾರ್ಥಿಗಳ ಭವಿಷ್ಯ ಕಾಯುವುದು ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯನ್ನು ದೇಶ ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಪ್ರಧಾನ್‌ ತಿಳಿಸಿದ್ದಾರೆ.

ಒಡಿಶಾ ಮೂಲದ ಬಿಜೆಪಿ ನಾಯಕರಾದ ಪ್ರಧಾನ್, 2021ರಲ್ಲಿ ಮೊದಲ ಬಾರಿಗೆ ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕವೂ ಅವರಿಗೆ ಅದೇ ಖಾತೆಯನ್ನು ಮರುಹಂಚಿಕೆ ಮಾಡಲಾಗಿತ್ತು.

ಈ ಹಿಂದೆ ರಾಜೀನಾಮೆ ನೀಡಿದ್ದ ಎಂ.ಜೆ. ಅಕ್ಬರ್...

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾಗಿದ್ದ ಅಕ್ಬರ್ ( ಪತ್ರಕರ್ತನಾಗಿದ್ದು ನಂತರ ರಾಜಕಾರಣಕ್ಕೆ ಮರಳಿದ್ದರು) ವಿರುದ್ಧ ಹಿರಿಯ ಪತ್ರಕರ್ತೆ ಪ್ರಿಯಾ ರಮಣಿ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ 10 ದಿನಗಳ ನಂತರ, ಅಂದರೆ 2018ರ ಅಕ್ಟೋಬರ್‌ನಲ್ಲಿ ಅಕ್ಬರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ 12ಕ್ಕೂ ಹೆಚ್ಚು ಪತ್ರಕರ್ತೆಯರು ಅಕ್ಬರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಆದರೆ ಅಕ್ಬರ್ ಈ ಎಲ್ಲಾ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದ್ದರು.

ದೇಶದ ಮಾಧ್ಯಮ ಹಾಗೂ ಸಿನಿಮಾ-ಕಿರುತೆರೆ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಿದ್ದ #ಮೀಟೂ ಚಳವಳಿಯ ವೇಳೆ ಗಂಭೀರ ಲೈಂಗಿಕ ಕಿರುಕುಳ ಆರೋಪ ಎದುರಿಸಿದ ಪ್ರಮುಖ ವ್ಯಕ್ತಿಗಳಲ್ಲಿ ಅಕ್ಬರ್ ಒಬ್ಬರಾಗಿದ್ದರು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries