ಮಲಪ್ಪುರಂ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಕುತಿರವಟ್ಟಂ ಮಾನಸಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಪ್ರಧಾನಿಯವರ ಶಿರಚ್ಛೇದ ಮಾಡುವುದಾಗಿ ಫೇಸ್‍ಬುಕ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಪರಪ್ಪನಂಗಡಿ ಚೆಟ್ಟಿಪಾಡಿ ಮೂಲದ ಯುವಕನನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ.
ಈ ವ್ಯಕ್ತಿ ಮಾನಸಿಕ ಸವಾಲುಗಳನ್ನು ಎದುರಿಸುತ್ತಿದ್ದಾನೆ ಎಂದು ಪೋಲೀಸರು ಈ ಹಿಂದೆ ತಿಳಿಸಿದ್ದರು. ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಮಲಪ್ಪುರಂ ಸೈಬರ್ ಕ್ರೈಮ್ ಪೆÇಲೀಸರು ಯುವಕನ ವಿರುದ್ಧ ಪ್ರಕರಣ ದಾಖಲಿಸಿದ್ದರು.
ವಿಡಿಯೋವನ್ನು ಫೇಸ್‍ಬುಕ್‍ನಿಂದ ತೆಗೆದುಹಾಕಲಾಗಿದೆ. ವಿಡಿಯೋ ರೆಕಾರ್ಡ್ ಮಾಡಲು ಬಳಸಿದ ಮೊಬೈಲ್ ಫೆÇೀನ್ ಅನ್ನು ವಶಕ್ಕೆ ಪಡೆಯಲಾಗಿದೆ.
ಹೈಟೆಕ್ ಸೆಲ್ ಸಹಾಯದಿಂದ ಪೆÇಲೀಸರು ಪೆÇೀಸ್ಟ್ ಅಡಿಯಲ್ಲಿ ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಕಾಮೆಂಟ್‍ಗಳನ್ನು ಪೆÇೀಸ್ಟ್ ಮಾಡಿದವರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಅವರ ಮೇಲೆಯೂ ಪ್ರಕರಣ ದಾಖಲಿಸಲಾಗುವುದು.

