ತಿರುವನಂತಪುರಂ: ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದೆ.
ಬಹುತೇಕೆಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 24 ಗಂಟೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆ ಬೀಳಬಹುದು ಎಂದು ಮುನ್ಸೂಚನೆ ಇದೆ.
ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಪ್ರಕಟಿಸಿದೆ. ಗುಡುಗು ಸಹಿತ ಮಳೆ ಅಪಾಯಕಾರಿಯಾಗಿರುವುದರಿಂದ ಸಾರ್ವಜನಿಕರು ಅತ್ಯಂತ ಜಾಗರೂಕರಾಗಿರಲು ಸೂಚಿಸಿದೆ.

