HEALTH TIPS

ಏಕನಾಥ್ ಶಿಂಧೆ ಬಣಕ್ಕೆ ಸಂಸದರ ವಿಲೀನ : ಸ್ವೀಕರ್ ಓಂ ಬಿರ್ಲಾಗೆ ಸುಪ್ರೀಂ ಕೋರ್ಟ್‌ ನೋಟಿಸ್

ನವದೆಹಲಿ: ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಆರು ಬಂಡಾಯ ಸಂಸದರು ವಿಲೀನಗೊಂಡಿರುವುದನ್ನು ಅಂಗೀಕರಿಸಿದ ಲೋಕಸಭಾ ಸ್ವೀಕರ್ ನಿರ್ಧಾರ ಪ್ರಶ್ನಿಸಿ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ (ಯುಬಿಟಿ) ಬಣ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಲೋಕಸಭಾ ಸ್ವೀಕರ್ ಓಂ ಬಿರ್ಲಾ, ಲೋಕಸಭಾ ಕಾರ್ಯದರ್ಶಿ ಮತ್ತು 6 ಬಂಡಾಯ ಶಿವಸೇನಾ ಸಂಸದರಿಗೆ ನೋಟಿಸ್ ನೀಡಿದೆ.


ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರನ್ನೊಳಗೊಂಡ ಪೀಠ ಈ ಹಂತದಲ್ಲಿ ಸ್ವೀಕರ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ನಂತರ ನಿಗದಿಪಡಿಸಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೊಂದಿಗೆ ಆರು ಬಂಡಾಯ ಸಂಸದರ ವಿಲೀನವನ್ನು ಅಂಗೀಕರಿಸಿದ ಲೋಕಸಭಾ ಸ್ವೀಕರ್ ಓಂ ಬಿರ್ಲಾ ಅವರ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನಾ ಉದ್ಧವ್ ಬಾಳಾ ಸಾಹೇಬ್ ಠಾಕ್ರೆ (ಯುಬಿಟಿ) ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ನೋಟಿಸ್ ಜಾರಿ ಮಾಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries