HEALTH TIPS

ಜಿಎಸ್‍ಟಿ ಸುಧಾರಣೆ ಮತ್ತು ಸಾಮಾಜಿಕ-ಆರ್ಥಿಕ ಪರಿಣಾಮಗಳು-ರಾಷ್ಟ್ರೀಯ ಸಮ್ಮೇಳನ ಸಮಾರೋಪ

ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕಾಸರಗೋಡು ಪೆರಿಯ ಕ್ಯಾಂಪಸ್‍ನಲ್ಲಿ ವಾಣಿಜ್ಯ ಮತ್ತು ಅಂತಾರಾಷ್ಟ್ರೀಯ ವ್ಯವಹಾರಗಳ ವಿಭಾಗವು ಐಸಿಎಸ್‍ಎಸ್‍ಆರ್   ಸಹಯೋಗದೊಂದಿಗೆ ಆಯೋಜಿಸಿದ್ದ 'ಜಿಎಸ್‍ಟಿ ಸುಧಾರಣೆ ಮತ್ತು ಸಾಮಾಜಿಕ-ಆರ್ಥಿಕ ಪರಿಣಾಮಗಳು' ಕುರಿತ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವು ಸಂಪನ್ನಗೊಂಡಿತು. ಸಾಮಾನ್ಯ ಜನರು ಸೇರಿದಂತೆ ಎಲ್ಲಾ ಜನರ ಮೇಲೂ ಪ್ರಭಾವ ಬೀರುವ ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‍ಟಿ) ಕುರಿತಾಗಿ ಆಯೋಜಿಸಲಗಿದ್ದ ಸಮ್ಮೇಳನ, ತೆರಿಗೆ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಹಕರಿಯಾಗಿತ್ತು. 


ಪ್ರಭಾರ ಕುಲಸಚಿವ ಪೆÇ್ರಫೆಸರ್ ವಿ.ಬಿ. ಸಮೀರ್ ಕುಮಾರ್ ಅವರು ಸಮಾರೋಪ ಸಮಾರಂಭ ಉದ್ಘಾಟಿಸಿದರು. ಕಾಸರಗೋಡಿನ ತೆರಿಗೆದಾರರ ಸೇವೆಗಳ ಜಂಟಿ ಆಯುಕ್ತ ಪಿ.ಸಿ. ಜಯರಾಜನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಾಣಿಜ್ಯ ಮತ್ತು ಅಂತಾರಾಷ್ಟ್ರೀಯ ವ್ಯವಹಾರ ವಿಭಾಗದ ಮುಖ್ಯಸ್ಥ ಪೆÇ್ರಫೆಸರ್ ಸಾಜಿ ಟಿ.ಜಿ. ಸ್ವಾಗತಿಸಿದರು. ಸಮ್ಮೇಳನದ ಕಾರ್ಯದರ್ಶಿ ಡಾ. ಕೆ. ಶ್ರವಣ ವಂದಿಸಿದರು. ದೇಶದ ವಿವಿಧ ಭಾಗಗಳಿಂದ ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಇದರಲ್ಲಿ ಭಾಗವಹಿಸಿದ್ದರು. ವಿವಿಧ ಕಾರ್ಯಗಾರಗಳಲ್ಲಿ ಇಪ್ಪತ್ತಕ್ಕೂ ಹೆಚ್ಚು ಪ್ರಬಂಧ ಮಂಡಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries