HEALTH TIPS

ಕಾಸರಗೋಡು ಕನ್ನಡ ಗ್ರಾಮದಲ್ಲಿ ಪತ್ರಿಕಾ ದಿನಾಚರಣೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ ಕಾಸರಗೋಡು ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ, ಕನ್ನಡ ಪತ್ರಿಕಾ ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಕನ್ನಡ ಗ್ರಾಮದಲ್ಲಿ ಜರುಗಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕೆ. ಪುರುಷೋತ್ತಮ ಮಾಸ್ತರ್   ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಬೆಂಗಳೂರು ಇದರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 


ಲೇಖಕ, ಅಂಕಣಕಾರ, ಪ್ರಕಾಶಕ, ವಿಷ್ಣು ಕೆ.ಶ್ಯಾನುಭೋಗ್ ಕೂಡ್ಲು ಅಧ್ಯಕ್ಷತೆ ವಹಿಸಿದ್ದರು. ಗಡಿನಾಡು ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಪತ್ರಿಕೋದ್ಯಮ ನಡೆದು ಬಂದ ದಾರಿ- ಮತ್ತು ಇತಿಹಾಸದ ಕುರಿತು ಕವಿ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ವಿಶೇಷ ಉಪನ್ಯಾಸ ನೀಡಿದರು.

ಪತ್ರಿಕಾ ವಿತರಕ ವಿಶ್ವಾಸ್ ಕಾಸರಗೋಡು ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಶ್ರೀಕಾಂತ ಕಾಸರಗೋಡು, ಸಾಧಕರಾದ ಜಯಾನಂದ ಕುಮಾರ್ ಹೊಸದುರ್ಗ,   ವಿಷ್ಣು ಕೆ. ಶ್ಯಾನುಭೋಗ್  ಕೂಡ್ಲು, ಗಣೇಶ್ ಪಾರೆಕಟ್ಟೆ ಅವರನ್ನು ಅಭಿನಂದಿಸಲಾಯಿತು.  

 ಪೆÇ್ರ. ಎ. ಶ್ರೀನಾಥ ಕಾಸರಗೋಡು, ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ,  ಕೆ. ವಿ. ರಮೇಶ ಕಾಸರಗೋಡು, ನಗರ ಸಭಾ ಮಾಜಿ ಕೌನ್ಸಿಲರ್ ಕೆ. ವರಪ್ರಸಾದ ಕೋಟೆಕಣಿ, ಕೆ. ಸಿ. ಎನ್ ಚಾನಲ್ ನಿರ್ದೇಶಕ ಪುರುಷೋತ್ತಮ ಎಂ. ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಪತ್ರಕರ್ತ ಪುರುಷೋತ್ತಮ ಭಟ್ ಮೊದಲಾದವರು ಉಪಸ್ಥಿತರಿದ್ದರು. ಕರಾವಳಿ ಸಾಂಸ್ಕೃತಿಕ  ಪ್ರತಿಷ್ಠಾನದ  ಪ್ರಧಾನ ಕಾರ್ಯದರ್ಶಿ ಕೆ. ಜಗದೀಶ ಕೂಡ್ಲು ಸ್ವಾಗತಿಸಿದರು. ಅನುಷಾ ಕೆ, ಕೃಪಾನಿಧಿ ಕೆ.ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಗ್ರಾಮದ ಕುಶಲ ಕುಮಾರ ಕೆ. ವಂದಿಸಿದರು.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries