ಬದಿಯಡ್ಕ: ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಷಷ್ಠ ಚಾತುರ್ಮಾಸ್ಯದ ಅಂಗವಾಗಿ ಸ್ಥಳೀಯರ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ಜರಗಿತು. ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯರು ಉಗ್ರಾಣ ಮುಹೂರ್ತ ನೆರವೇರಿಸಿದರು. ನೂರಾರು ಮಂದಿ ಭಗವದ್ಭಕ್ತರು, ಶ್ರೀಮಠದ ಶಿಷ್ಯಂದಿರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

.jpg)
