ಕುಂಬಳೆ: ಕಾಸರಗೋಡಿನ ಕರ್ನಾಟಕ ಸಮಿತಿ, ಕಸಾಪ ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮನವಿಗೆ ಸ್ಪಂಧಿಸಿದ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಕೇರಳ ಸರ್ಕಾರಕ್ಕೆ ಪತ್ರ ಬರೆದು ಸಾಂವಿಧಾನಿಕ ಹಕ್ಕಿನ ಬಗ್ಗೆ ಎಚ್ಚರಿಸಿದ್ದಾರೆ.
ಮನವಿ ಏನಾಗಿತ್ತು?:
ಕೇರಳ ಸರ್ಕಾರ ಅನುಮೋದಿಸಿರುವ ಕೇರಳಂ ಮಲೆಯಾಳಂ ಭಾಷಾ ಮಸೂದೆ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಮೇಲೆ ಪ್ರತಿಕೂಲತೆ ಸೃಷ್ಟಿಸಲಿದ್ದು, ಈ ಬಗ್ಗೆ ಇತ್ತೀಚೆಗೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ಎಂಬಲ್ಲಿ ನಡೆದ ಕಯ್ಯಾರ ಕಿಞ್ಞಣ್ಣ ರೈ ಜನ್ಮ ದಿನಾಚರಣೆ ಸಮಾರಂಭಕ್ಕೆ ಆಗಮಿಸಿದ್ದ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿಯವರಿಗೆ ಕಸಾಪ ಕೇರಳ ಗಡಿನಾಡ ಘಟಕಾಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಹಾಗೂ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ ಮನವಿ ನೀಡಿ ಸಮಸ್ಯೆಯ ಬಗ್ಗೆ ವಿವರಿಸಿದ್ದರ. ಈ ಬಗ್ಗೆ ಹೊರಟ್ಟಿ ಅವರು ಸೂಕ್ತ ಕ್ರಮದ ಭರವಸೆ ನೀಡಿದ್ದರು.
ಇದೀಗ ಸಭಾಪತಿಗಳು ಕೇರಳ ಮುಖ್ಯಮಂತ್ರಿಗಳಿಗೆ ಜ್ಞಾಪಕ ಪತ್ರವೊಂದನ್ನು ರವಾನಿಸಿ ಗಡಿನಾಡಿನ ಕನ್ನಡಿಗರ ಮೇಲೆ ಮಲೆಯಾಳಂ ಭಾಷಾ ಮಸೂದೆ ಪ್ರತಿಕೂಲತೆ ಸೃಷ್ಟಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

-side.jpg)
-side.jpg)
