HEALTH TIPS

ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ 'ಸುಪ್ರೀಂ' ತಡೆ

 ಚೆನ್ನೈ: ತಮಿಳುನಾಡಿನಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿ ಮದ್ರಾಸ್‌ ಹೈಕೋರ್ಟ್‌ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. 


ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ.

ಬಕ್ರೀದ್ ಹಬ್ಬದ ಮುನ್ನಾದಿನ (ಮೇ 27) ಮದ್ರಾಸ್ ಹೈಕೋರ್ಟ್ ಹೊರಡಿಸಿದ್ದ ಈ ಆದೇಶವು 1958ರ 'ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ'ಗೆ ವಿರುದ್ಧವಾಗಿದೆ ಎಂದು ತಮಿಳುನಾಡು ಸರ್ಕಾರವು ವಾದಿಸಿತ್ತು.

ಈ ಕಾಯ್ದೆಯು ಸಕ್ಷಮ ಪ್ರಾಧಿಕಾರದ ಪ್ರಮಾಣೀಕರಣಕ್ಕೆ ಒಳಪಟ್ಟು, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಯೋಗ್ಯವಲ್ಲದ 10 ವರ್ಷಕ್ಕಿಂತ ಮೇಲ್ಪಟ್ಟ ಹಸುಗಳ ವಧೆಗೆ ಅನುಮತಿ ನೀಡುತ್ತದೆ.

'ಹಿಂದೂ ಮಕ್ಕಳ್‌ ಕಚ್ಚಿ' ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ. ಸೂರ್ಯ ಪ್ರಶಾಂತ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸುವಾಗ, ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರನ್ನೊಳಗೊಂಡ ಹೈಕೋರ್ಟ್‌ ದ್ವಿಸದಸ್ಯ ಪೀಠವು ಈ ಆದೇಶ ಹೊರಡಿಸಿತ್ತು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries