HEALTH TIPS

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶಾಲೆಗಳಿಗೆ ಪ್ರಶಂಸಾ ಪತ್ರ ವಿತರಣೆ

ಮಂಜೇಶ್ವರ: ಜಿಲ್ಲಾ ಪಂಚಾಯಿತಿ ವರ್ಕಾಡಿ ವಿಭಾಗ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ, 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸೆಲ್ಸಿ ಮತ್ತು ಪ್ಲಸ್ ಟು ಪರೀಕ್ಷೆಗಳ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಶ್ರೇಣಿಯನ್ನು ಪಡೆದ ವಿದ್ಯಾರ್ಥಿಗಳನ್ನು 'ಪ್ರತಿಭಾ' ಪ್ರಶಸ್ತಿ ಹಾಗೂ  ಪದಕ ನೀಡಿ ಗೌರವಿಸಲಾಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷದ್ ವರ್ಕಾಡಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕೊಡ್ಲಮೊಗರು ಶ್ರೀ ವಾಣಿ ವಿಜಯ ಪ್ರೌಢಶಾಲಾ ವಠಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ   ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಸಮಾರಂಭ ಉದ್ಘಾಟಿಸಿದರು. ಶಾಸಕ ಎ.ಕೆ.ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಎಸ್ಸೆಸೆಲ್ಸಿ, ಪ್ಲಸ್‍ಟು ಪರೀಕ್ಷೆಗಳಲ್ಲಿ ಶೇ. 100 ರಷ್ಟು ಫಲಿತಾಂಶವನ್ನು ಸಾಧಿಸಿದ ಶಾಲೆಗಳಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಪಂಚಾಯತ್ ಸದಸ್ಯ ಅಜೀಜ್ ಕಳತ್ತೂರ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಙಳ್,  ಉಪಾಧ್ಯಕ್ಷೆ ಕೆ.ಕಮಲಾಕ್ಷಿ, ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ, ವರ್ಕಾಡಿ ಗ್ರಾಪಂ ಅಧ್ಯಕ್ಷ ಉಮ್ಮರ್ ಬೋರ್ಕಾಲ, ಉಪಾಧ್ಯಕ್ಷೆ ನಸೀಮಾ ಅಶ್ರಫ್, ಮೀಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಂಜ, ಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯೆ ಕೆ.ಬೀಫಾತಿಮಾ, ಪುರುಷೋತ್ತಮ ಆರಿಬೈಲು, ಮೀಂಜ ಗ್ರಾಪಂ ಸದಸ್ಯೆ ಸೌಮ್ಯ ಕಳಿಯೂರು, ಮಂಜೇಶ್ವರ ಗ್ರಾಪಂ ಸದಸ್ಯ ಇಲಿಯಾಸ್ ತೂಮಿನಾಡು  ಎಸ್‍ವಿವಿ ಎಚ್‍ಎಸ್ ಕೊಡ್ಲಮೊಗರು ಪ್ರಾಂಶುಪಾಲ ವಿಜಯಕುಮಾರ್, ಮುಖ್ಯಶಿಕ್ಷಕಿ ಕೆ.ಕೃಷ್ಣವೇಣಿ, ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾದ್ ವರ್ಕಾಡಿ ಸ್ವಾಗತಿಸಿದರು. ಕಿಶೋರ್ ಕುಮಾರ್ ಮತ್ತು ವನಿತಾ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವರ್ಕಾಡಿ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಗೂ ಶಾಲಾ ಪಿಟಿಎ ಅಧ್ಯಕ್ಷ ಅಬ್ದುಲ್ ಮಜೀದ್ ಬಿ.ಎ.  ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries