HEALTH TIPS

ರಾಜ್ಯದಾದ್ಯಂತ ಶೈಕ್ಷಣಿಕ ಬಂದ್ ನಡೆಸಲಿರುವ ಕೆಎಸ್‍ಯು

ತಿರುವನಂತಪುರಂ: ಕೆಎಸ್‍ಯು ಇಂದು ರಾಜ್ಯದಾದ್ಯಂತ ಶೈಕ್ಷಣಿಕ ಬಂದ್ ನಡೆಸಲಿದೆ. 


ನೀಟ್ ಪರೀಕ್ಷೆಯ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ಬೀದಿಗಳಲ್ಲಿ ಎಳೆದೊಯ್ದು ಥಳಿಸಿರುವ ಮತ್ತು ಈ ವಿಷಯದ ಕುರಿತು ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಸಂಸದರ ಮೇಲೆ ಪೋಲೀಸರು ಹಲ್ಲೆ ನಡೆಸಿರುವುದನ್ನು ವಿರೋಧಿಸಿ ರಾಜ್ಯದಾದ್ಯಂತ ಶೈಕ್ಷಣಿಕ ಬಂದ್‍ಗೆ ಕರೆ ನೀಡಲಾಗಿದೆ ಎಂದು ಕೆಎಸ್‍ಯು ರಾಜ್ಯ ಅಧ್ಯಕ್ಷ ಅಲೋಶಿಯಸ್ ಕ್ಸೇವಿಯರ್ ಈ ಬಗ್ಗೆ ಘೋಷಿಸಿದ್ದಾರೆ.

ರಾಜ್ಯದ ಎಲ್ಲಾ ಕ್ಯಾಂಪಸ್‍ಗಳಲ್ಲಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಗಳನ್ನು ದಹಿಸುವ ಮೂಲಕ ವಿದ್ಯಾರ್ಥಿ ಸಮುದಾಯವನ್ನು ಬೆಂಬಲಿಸಬೇಕೆಂದು ಕೆಎಸ್‍ಯು ವಿನಂತಿಸಿದೆ.

ಬಂದ್‍ಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗುವುದು ಎಂದು ಸಂಘಟನೆಯ ಪದಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries